Tuesday, October 6, 2026
Homeಕರಾವಳಿಉಡುಪಿಉಡುಪಿಯಲ್ಲಿ ಸಿಪಿಎಂ ಪ್ರತಿಭಟನೆ: ಚುನಾವಣಾ ಆಯೋಗದ ಮುಖ್ಯ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಆಗ್ರಹ

ಉಡುಪಿಯಲ್ಲಿ ಸಿಪಿಎಂ ಪ್ರತಿಭಟನೆ: ಚುನಾವಣಾ ಆಯೋಗದ ಮುಖ್ಯ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಆಗ್ರಹ

- Advertisement -
- Advertisement -

ಉಡುಪಿ: ಕೇಂದ್ರ ಸರ್ಕಾರ ಚುನಾವಣಾ ಆಯೋಗವನ್ನು ರಾಜಕೀಯ ಉದ್ದೇಶಗಳಿಗೆ ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಆರೋಪಿಸಿ ಸಿಪಿಎಂ ವತಿಯಿಂದ ಉಡುಪಿಯಲ್ಲಿ ಪ್ರತಿಭಟನೆ ನಡೆಸಲಾಯಿತು.

ಚುನಾವಣಾ ಆಯೋಗದ ಮುಖ್ಯ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಕೇಂದ್ರ ಸರ್ಕಾರ ರಕ್ಷಿಸುತ್ತಿದ್ದು, ಆಯೋಗವನ್ನು ರಾಜಕೀಯವಾಗಿ ಬಳಸಿಕೊಳ್ಳಲಾಗುತ್ತಿದೆ ಎಂದು ಸಿಪಿಎಂ ಜಿಲ್ಲಾ ಕಾರ್ಯದರ್ಶಿ ಸುರೇಶ್ ಕಲ್ಲಾಗರ ಆರೋಪಿಸಿದರು.

ಫಾರಂ-7 ಮೂಲಕ ನಡೆಯುತ್ತಿರುವ ಅಕ್ರಮಗಳ ಕುರಿತು ದೂರು ದಾಖಲಿಸಿ, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದರು. ಪ್ರಜಾಪ್ರಭುತ್ವ ರಕ್ಷಣೆಗಾಗಿ ಹೋರಾಟ ನಡೆಸುವವರ ವಿರುದ್ಧ ಪ್ರಕರಣ ದಾಖಲಿಸುವ ಮೂಲಕ ಪೊಲೀಸ್ ಇಲಾಖೆಯನ್ನೂ ದುರ್ಬಳಕೆ ಮಾಡಲಾಗುತ್ತಿದೆ ಎಂದು ಆರೋಪಿಸಿದರು.

ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸದಿದ್ದರೆ ಅಕ್ಟೋಬರ್ 10ರಂದು ದೆಹಲಿ ಸೇರಿದಂತೆ ದೇಶದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ತೀವ್ರ ಪ್ರತಿಭಟನೆ ನಡೆಸುವುದಾಗಿ ಸಿಪಿಎಂ ಎಚ್ಚರಿಕೆ ನೀಡಿದೆ.

- Advertisement -

Latest News

error: Content is protected !!