Saturday, June 13, 2026
Homeಕರಾವಳಿಉಡುಪಿಉಡುಪಿ: ಕ್ರಿಕೆಟ್ ಆಟಗಾರ ನೇಣು ಬಿಗಿದುಕೊಂಡು ಆತ್ಮ*ಹತ್ಯೆ

ಉಡುಪಿ: ಕ್ರಿಕೆಟ್ ಆಟಗಾರ ನೇಣು ಬಿಗಿದುಕೊಂಡು ಆತ್ಮ*ಹತ್ಯೆ

- Advertisement -
- Advertisement -

ಉಡುಪಿ: ಕ್ರಿಕೆಟ್ ಆಟಗಾರನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉದ್ಯಾವರ ಬೊಳ್ಜೆ ಎಂಬಲ್ಲಿ ನಡೆದಿದೆ. ಬೊಳ್ಜೆಯ ಆದಿತ್ಯ(24) ಮೃತ ದುರ್ದೈವಿ.

ಆದಿತ್ಯ ಕಳೆದ ವರ್ಷ ಅಪಘಾತದಲ್ಲಿ ಮೃತಪಟ್ಟ ತನ್ನ ಸ್ನೇಹಿತ ಸುಕ್ಷಿತ್ ಹೆಸರಿನಲ್ಲಿ ಕ್ರಿಕೆಟ್ ತಂಡವನ್ನು ಕಟ್ಟಿದ್ದರು. ಅಲ್ಲದೆ ಪೆರಂಪಳ್ಳಿಯಲ್ಲಿ ಭಾನುವಾರ ರಾತ್ರಿ ನಡೆದ ಕ್ರಿಕೆಟ್ ಪಂದ್ಯಾಟದಲ್ಲೂ ಇವರು ಭಾಗವಹಿಸಿದ್ದರು. ಅಲ್ಲಿಂದ ಮನೆಗೆ ಬಂದ ಆದಿತ್ಯ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ. ಈ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!