Sunday, April 28, 2024
Homeಕರಾವಳಿಉಡುಪಿದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಇಂದು ಕಂಡು ಬಂದ ಹೊಸ ಕೊರೋನಾ ಪ್ರಕರಣಗಳೆಷ್ಟು?

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಇಂದು ಕಂಡು ಬಂದ ಹೊಸ ಕೊರೋನಾ ಪ್ರಕರಣಗಳೆಷ್ಟು?

spot_img
- Advertisement -
- Advertisement -

ಮಂಗಳೂರು: ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಮತ್ತು ಉಡುಪಿಯಲ್ಲಿ ದಿನದಿಂದ ದಿನಕ್ಕೆ ಕೊರೊನಾ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ಎರಡು ಜಿಲ್ಲೆಗಳು ಸೇರಿ ಒಟ್ಟು 345 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿವೆ.

ಉಡುಪಿಯಲ್ಲೆಷ್ಟು ?
ಕೃಷ್ಣನಗರಿ ಉಡುಪಿ ಜಿಲ್ಲೆಯಲ್ಲಿ ಇಂದು ಭಾನುವಾರ 182 ಮಂದಿಗೆ ಕೊರೊನಾ ಸೋಂಕು ಧೃಡವಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ. ಈ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 4674ಕ್ಕೆ ಏರಿಕೆಯಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಕೊರೋನಾ ಅಂಕಿ ಅಂಶ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 163 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿವೆ. ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 6015ಕ್ಕೆ ಏರಿಕೆಯಾಗಿದೆ. ಇನ್ನು ಇಲ್ಲಿಯ ತನಕ 169 ಮಂದಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. 2730 ಮಂದಿ ಇಲ್ಲಿಯ ತನಕ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದಾರೆ.

ದ.ಕ ಜಿಲ್ಲೆಯ ತಾಲೂಕುವಾರು ಮಾಹಿತಿ
ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ತಾಲೂಕಿನಲ್ಲಿ 107 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಬಂಟ್ವಾಳದಲ್ಲಿ 13, ಬೆಳ್ತಂಗಡಿಯಲ್ಲಿ 19, ಪುತ್ತೂರು ಹನ್ನೊಂದು, ಸುಳ್ಯ ತಾಲೂಕಿನಲ್ಲಿ ಒಬ್ಬರಲ್ಲಿ ಸೋಂಕು ಪತ್ತೆಯಾಗಿದೆ. ಹೊರ ಜಿಲ್ಲೆಯ 9 ಹಾಗೂ ಹೊರ ರಾಜ್ಯದ ಮೂವರಲ್ಲಿ ರವಿವಾರದಂದು ಸೋಂಕು ಪತ್ತೆಯಾಗಿದೆ.

- Advertisement -
spot_img

Latest News

error: Content is protected !!