Thursday, May 16, 2024
Homeಕರಾವಳಿಉಡುಪಿಉಡುಪಿ ಜಿಲ್ಲೆಯಲ್ಲಿ ಮುಂದಿನ 15 ದಿನ ಯಾವುದೇ ಮದುವೆ ಕಾರ್ಯಕ್ರಮಕ್ಕೆ ಅವಕಾಶವಿಲ್ಲ: ಜಿಲ್ಲಾಧಿಕಾರಿ

ಉಡುಪಿ ಜಿಲ್ಲೆಯಲ್ಲಿ ಮುಂದಿನ 15 ದಿನ ಯಾವುದೇ ಮದುವೆ ಕಾರ್ಯಕ್ರಮಕ್ಕೆ ಅವಕಾಶವಿಲ್ಲ: ಜಿಲ್ಲಾಧಿಕಾರಿ

spot_img
- Advertisement -
- Advertisement -

ಉಡುಪಿ: ಜಿಲ್ಲೆಯಲ್ಲಿ ವ್ಯಾಪಕವಾಗಿ ಹರಡುತ್ತಿರುವ ಕೋವಿಡ್ ಸೋಂಕನ್ನು ನಿಯಂತ್ರಿಸುವ ಉದ್ದೇಶದಿಂದ ಜಿಲ್ಲೆಯಲ್ಲಿ ನಾಳೆಯಿಂದ (ಮೇ.25) ಜೂನ್ 7ರವರೆಗೆ ಯಾವುದೇ ಮದುವೆ ಸಮಾರಂಭಗಳಿಗೆ ಅವಕಾಶ ನೀಡುವುದಿಲ್ಲ ಎಂದು ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ಹೇಳಿದ್ದಾರೆ.

ಇಂದು ನಡೆದ ಮಹತ್ವದ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮದುವೆ, ಮೆಹಂದಿ ಸಮಾರಂಭಗಳಲ್ಲಿ ಭಾಗವಹಿಸುವವರಲ್ಲೇ ಹೆಚ್ಚಾಗಿ ಸೋಂಕು ಕಂಡು ಬರುತ್ತಿದೆ. ಹೀಗಾಗಿ ಮದುವೆಗೆ ಇಂದು ಸಂಜೆಯವರೆಗೆ ನೀಡಲಾದ ಅನುಮತಿ ಮಾತ್ರ ಮಾನ್ಯವಾಗಿರುತ್ತದೆ. ಜೂ.7ರವರೆಗೆ ಮದುವೆ ಸಮಾರಂಭಗಳಿಗೆ ಅನುಮತಿ ಇಲ್ಲ. ನಿಶ್ಚಿತಾರ್ಥ ಸೇರಿದಂತೆ ಯಾವುದೇ ಕಾರ್ಯಕ್ರಮಗಳಿಗೆ ಅವಕಾಶ ನೀಡುವುದಿಲ್ಲ ಎಂದರು.

ಮದುವೆಗಳಲ್ಲಿ ಭಾಗವಹಿಸಿ ನಿಮ್ಮ ಹಿರಿಯರನ್ನು ಕಳೆದುಕೊಳ್ಳಬೇಡಿ. ಮಹೆಂದಿ, ಬೀಗರೂಟ ಮುಂತಾದ ಕಾರ್ಯಕ್ರಮ ಮಾಡಿದರೆ ಕ್ರಿಮಿನಲ್ ಮೊಕದ್ದಮೆ ಹೂಡಲಾಗುವುದು. ಕಾರ್ಯಕ್ರಮ ಮಾಡಿದವರ ಮತ್ತು ಭಾಗವಹಿಸಿದವರ ವಿರುದ್ಧವೂ ಕ್ರಿಮಿನಲ್ ಮೊಕದ್ದಮೆ ಹಾಕಲಾಗುವುದು ಎಂದರು.

- Advertisement -
spot_img

Latest News

error: Content is protected !!