Wednesday, June 24, 2026
Homeಕರಾವಳಿಉಡುಪಿಉಡುಪಿ; ತಾಯಿ ಮೊಬೈಲ್ ನೋಡ್ಬೇಡ ಎಂದು ಬುದ್ಧಿ ಹೇಳಿದ್ದಕ್ಕೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ

ಉಡುಪಿ; ತಾಯಿ ಮೊಬೈಲ್ ನೋಡ್ಬೇಡ ಎಂದು ಬುದ್ಧಿ ಹೇಳಿದ್ದಕ್ಕೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ

- Advertisement -
- Advertisement -

ಉಡುಪಿ; ತಾಯಿ ಮೊಬೈಲ್ ನೋಡ್ಬೇಡ ಎಂದು ಬುದ್ಧಿ ಹೇಳಿದ್ದಕ್ಕೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಿರೇಬೆಟ್ಟು ಗ್ರಾಮದ ಬಾಲ್ಕಟ್ಟು ಎಂಬಲ್ಲಿ ನಡೆದಿದೆ.

ಬಾಲ್ಕಟ್ಟು ನಿವಾಸಿ ಮಲ್ಲಿಕಾ ಎಂಬವರ ಮಗಳು ಸಮನ್ವಿ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಉಡುಪಿ ಸರಕಾರಿ ಮಹಿಳಾ ಪದವಿ ಪೂರ್ವ ಕಾಲೇಜಿನಲ್ಲಿ ಎರಡನೇ ವರ್ಷದ ಪಿಯುಸಿ ಓದುತ್ತಿದ್ದ ಸಮನ್ವಿಗೆ ಡಿ.26ರಂದು ಸಂಜೆ ವೇಳೆ ತಾಯಿ ಮುಂಬರುವ ಪರೀಕ್ಷೆಯ ಬಗ್ಗೆ ಓದಲು ಹೇಳಿದ್ದರು. ಆದರೂ ಸಮನ್ವಿ ಓದದೇ ಫೋನ್‌ನಲ್ಲಿ ಮಾತಾನಾಡುತ್ತಿದ್ದಳು. ಈ ವೇಳೆ ತಾಯಿ ಆಕೆಗೆ ಬುದ್ದಿವಾದದ ಮಾತು ಹೇಳಿದ್ದರು.

ಇದೇ ಚಿಂತೆಯಲ್ಲಿ ಸಮನ್ವಿ ಮನೆಯ ಬೆಡ್‌ ರೂಂನಲ್ಲಿ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆಗೆ ಯತ್ನಿಸಿದ್ದರು. ಕೂಡಲೇ ಮನೆಯವರು ಅವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಗಂಭೀರ ಸ್ಥಿತಿಯಲ್ಲಿದ್ದ ಸಮನ್ವಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!