- Advertisement -
- Advertisement -
ಉಡುಪಿ: ಚಿಕ್ಕಮಗಳೂರಿನಲ್ಲಿ ವಕೀಲನ ಮೇಲೆ ಪೊಲೀಸರಿಂದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿಯಲ್ಲಿ ವಕೀಲರು ಪ್ರತಿಭಟನೆ ನಡೆಸಿದ್ದಾರೆ.
ಹಲ್ಲೆ ಮಾಡಿದ ಪೋಲಿಸರ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯಿಸಿ ಉಡುಪಿ ವಕೀಲರ ಸಂಘದಿಂದ ಪ್ರತಿಭಟನೆ ನಡೆಸಲಾಗಿದೆ. ಉಡುಪಿ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ವಕೀಲರು 15 ನಿಮಿಷಗಳ ಕಲಾಪ ಬಹಿಷ್ಕರಿಸಿ ಪ್ರತಿಭಟನೆ ನಡೆಸಿದ್ದಾರೆ. ಹಲ್ಲೆ ನಡೆಸಿದ ಪೊಲೀಸ್ ಮೇಲೆ ಕ್ರಮ ಕೈಗೊಳ್ಳಬೇಕು ಮತ್ತು ವಕೀಲರ ರಕ್ಷಣಾ ಕಾಯ್ದೆಯನ್ನು ಶೀಘ್ರ ಜಾರಿ ಮಾಡಬೇಕು ಎಂದು ಪ್ರತಿಭಟನೆ ವೇಳೆ ವಕೀಲರು ಆಗ್ರಹಿಸಿದ್ದಾರೆ.
- Advertisement -