Wednesday, June 3, 2026
Homeಕರಾವಳಿಉಡುಪಿಮಣಿಪಾಲದಲ್ಲಿ ಡಿಸಿ ಕಚೇರಿ ಎದುರು ಉಡುಪಿ ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ

ಮಣಿಪಾಲದಲ್ಲಿ ಡಿಸಿ ಕಚೇರಿ ಎದುರು ಉಡುಪಿ ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ

- Advertisement -
- Advertisement -

ಉಡುಪಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಇಡಿ ವಿಚಾರಣೆ ಹಿನ್ನಲೆಯಲ್ಲಿ ಮಣಿಪಾಲ‌ದಲ್ಲಿರುವ ಉಡುಪಿ‌ ಜಿಲ್ಲಾಧಿಕಾರಿ ‌ಕಚೇರಿ ಎದುರು
ಉಡುಪಿ ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ ನಡೆಸಿದೆ.

ಮಣಿಪಾಲ ಕಾಯಿನ್ ಸರ್ಕಲ್ ನಿಂದ ಜಿಲ್ಲಾಧಿಕಾರಿ ಕಚೇರಿಯವರೆಗೆ ಪ್ರತಿಭಟನಾ ಜಾಥಾ ನಡೆಸಿ ಕಾಂಗ್ರೆಸ್ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರತಿಭಟನೆ ವೇಳೆ ಜಿಲ್ಲಾಧಿಕಾರಿ ಕಚೇರಿಗೆ ನುಗ್ಗಲು ಯತ್ನಿಸಿದ ಕಾಂಗ್ರೆಸ್ ಮುಖಂಡರನ್ನು ಪೊಲೀಸರು ತಡೆದಿದ್ದಾರೆ. ಅಪರ ಜಿಲ್ಲಾಧಿಕಾರಿ ಮೂಲಕ ರಾಷ್ಟ್ರಪತಿಗೆ ಕಾಂಗ್ರೆಸ್ ನಾಯಕರು ಮನವಿ ಸಲ್ಲಿಸಿದ್ದಾರೆ. ಮಾಜಿ ಸಚಿವ ವಿನಯಕುಮಾರ್ ಸೊರಕೆ ಮತ್ತಿತ್ತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

- Advertisement -

Latest News

error: Content is protected !!