Monday, May 6, 2024
Homeಕರಾವಳಿಉಡುಪಿಪಾಸಿಟಿವಿಟಿ ರೇಟ್ ಆಧಾರದಲ್ಲಿ ಉಡುಪಿ ಜಿಲ್ಲೆಯನ್ನೂ ವಾರಾಂತ್ಯದ ಕರ್ಫ್ಯೂಗೆ ಸೇರಿಸಲಾಗಿದೆ: ಕೋಟ ಶ್ರೀನಿವಾಸ ಪೂಜಾರಿ

ಪಾಸಿಟಿವಿಟಿ ರೇಟ್ ಆಧಾರದಲ್ಲಿ ಉಡುಪಿ ಜಿಲ್ಲೆಯನ್ನೂ ವಾರಾಂತ್ಯದ ಕರ್ಫ್ಯೂಗೆ ಸೇರಿಸಲಾಗಿದೆ: ಕೋಟ ಶ್ರೀನಿವಾಸ ಪೂಜಾರಿ

spot_img
- Advertisement -
- Advertisement -

ಉಡುಪಿ: ಪಾಸಿಟಿವಿಟಿ ರೇಟ್ ಆಧಾರದಲ್ಲಿ ಉಡುಪಿ ಜಿಲ್ಲೆಯನ್ನು ಕೂಡ ವಾರಾಂತ್ಯದ ಕರ್ಫ್ಯೂಗೆ ಸೇರಿಸಲಾಗಿದೆ. ಉನ್ನತ ಮಟ್ಟದಲ್ಲಿ ಚರ್ಚೆ ಮಾಡಿ‌ ಇದಕ್ಕೆ ಪರಿಹಾರ ಕಂಡುಕೊಳ್ಳಬೇಕಿದೆ. ಇದರಿಂದ ಜನರಿಗೆ ಬಹಳಷ್ಟು ಸಮಸ್ಯೆಯಾಗುತ್ತಿದೆ.

ಪಾಸಿಟಿವಿಟಿ ರೇಟ್ ಜಾಸ್ಥಿಯಾಗುತ್ತಿರುವ ಬಗ್ಗೆ ಜಾಗೃತೆ ವಹಿಸಬೇಕಿರುವ ಅನಿವಾರ್ಯತೆ‌ ಕೂಡ ಇದೆ. ಈ ಬಗ್ಗೆ ಮುಖ್ಯಮಂತ್ರಿಗಳು ಹಾಗೂ ಆರೋಗ್ಯ ಮಂತ್ರಿಗಳೊಂದಿಗೆ ಚರ್ಚೆ ನಡೆಸಲಾಗುತ್ತದೆ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

ಬುಧವಾರದಂದು ಕುಂದಾಪುರ ಪ್ರವಾಸಿ ಮಂದಿರದಲ್ಲಿ ಸಮಾಜ ಕಲ್ಯಾಣ ಇಲಾಖಾಧಿಕಾರಿಗಳ ಜೊತೆ ಸಭೆ ನಡೆಸಿದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ್ದಾರೆ.

ಇನ್ನೂ ಜಿಲ್ಲಾ ಮಟ್ಟದಲ್ಲಿ ನಡೆಯುವ ದಲಿತರ ಕುಂದು ಕೊರತೆ ಸಭೆಯನ್ನು ಶೀಘ್ರ ಮಾಡಲು ಸಿಎಂ ಸೂಚಿಸಿದ್ದಾರೆ. ಮೊದಲು ಡಿಸಿ ಹಾಗೂ ಅಸಿಸ್ಟೆಂಟ್ ಕಮಿಷನರ್ ಈ ಸಭೆಯಲ್ಲಿ ಭಾಗವಹಿಸುತ್ತಿದ್ದು 6 ತಿಂಗಳಿಗೊಮ್ಮೆ ನಡೆಯುವ ಸಭೆಯಲ್ಲಿ‌ ಜಿಲ್ಲಾ ಉಸ್ತುವಾರಿ ಸಚಿವರು ಭಾಗವಹಿಸಲು ಸೂಚಿಸಲಾಗಿದೆ ಎಂದರು.

- Advertisement -
spot_img

Latest News

error: Content is protected !!