Wednesday, May 15, 2024
Homeಕರಾವಳಿಉಡುಪಿಉಡುಪಿ ಜಿಲ್ಲಾಸ್ಪತ್ರೆಯ ಇಬ್ಬರು ವೈದ್ಯರು ಹಾಗೂ ನಾಲ್ವರ ಸಿಬ್ಬಂದಿಗೆ ಕೊರೊನಾ ಪಾಸಿಟಿವ್

ಉಡುಪಿ ಜಿಲ್ಲಾಸ್ಪತ್ರೆಯ ಇಬ್ಬರು ವೈದ್ಯರು ಹಾಗೂ ನಾಲ್ವರ ಸಿಬ್ಬಂದಿಗೆ ಕೊರೊನಾ ಪಾಸಿಟಿವ್

spot_img
- Advertisement -
- Advertisement -

ಉಡುಪಿ: ಇಲ್ಲಿನ ಜಿಲ್ಲಾಸ್ಪತ್ರೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಇಬ್ಬರು ವೈದ್ಯರು ಹಾಗೂ ನಾಲ್ವರು ಸಿಬ್ಬಂದಿಗೆ ಕೋವಿಡ್ ಸೋಂಕು ತಗುಲಿರುವುದು ದೃಢಪಟ್ಟಿದೆ.

ಜಿಲ್ಲಾಸ್ಪತ್ರೆಯ ಇಬ್ಬರು ವೈದ್ಯರಿಗೆ ಕೊರೊನಾ ಪಾಸಿಟಿವ್ ಬಂದಿರೋದು ಸಾರ್ವಜನಿಕರ ಆತಂಕಕ್ಕೆ ಕಾರಣವಾಗಿದೆ. ಕೋವಿಡ್ ಲಕ್ಷಣವಿಲ್ಲದ ಸೋಂಕಿತರ ಸಂಪರ್ಕದಿಂದ ಇವರಿಗೆ ಸೋಂಕು ತಾಗಿರಬಹುದು ಎಂದು ಅಂದಾಜಿಸಲಾಗಿದೆ. ಇವರಲ್ಲಿ ಒಬ್ಬರು ವೈದ್ಯರು ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೆ, ಮತ್ತೊಬ್ಬರು ಮನೆಯಲ್ಲಿಯೇ ಚಿಕಿತ್ಸೆ ಮುಂದುವರಿಸಿದ್ದಾರೆ.

ಇನ್ನು ಜಿಲ್ಲಾಸ್ಪತ್ರೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ನಾಲ್ವರು ಸಿಬ್ಬಂದಿಗೆ ಕೋವಿಡ್-19 ಸೋಂಕು ದೃಢವಾಗಿದೆ. ಇವರಿಗೆ ಮನೆಯಲ್ಲಿಯೇ ಚಿಕಿತ್ಸೆ ನೀಡಲಾಗುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ. ಹಾಗೇ ಇವರ ಸಂಪರ್ಕಕ್ಕೆ ಬಂದ ಇತರ ಸಿಬ್ಬಂದಿಯ ಗಂಟಲು ದ್ರವ ಪರೀಕ್ಷೆಗೆ ಕಳುಹಿಸಿಕೊಡಲಾಗಿದೆ ಎನ್ನಲಾಗಿದೆ.

ಹಾಗೇ ಅನ್ಯ ರೋಗದ ಕಾರಣದಿಂದ ಜಿಲ್ಲಾಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ಓರ್ವ ರೋಗಿಗೆ ಕೋವಿಡ್-19 ಸೋಂಕು ತಾಗಿರುವುದು ದೃಢವಾಗಿದೆ. ಹೀಗಾಗಿ ಇವರಿಗೆ ಪ್ರತ್ಯೇಕವಾಗಿ ಚಿಕಿತ್ಸೆ ನೀಡಲಾಗುತ್ತಿದೆ.

- Advertisement -
spot_img

Latest News

error: Content is protected !!