Wednesday, July 15, 2026
Homeಕರಾವಳಿಉಡುಪಿಉಡುಪಿ: ಮಳೆ ಹಾನಿ ಪ್ರದೇಶಗಳಿಗೆ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೇಟಿ

ಉಡುಪಿ: ಮಳೆ ಹಾನಿ ಪ್ರದೇಶಗಳಿಗೆ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೇಟಿ

- Advertisement -
- Advertisement -

ಉಡುಪಿ: ಮಳೆಯಿಂದಾಗಿ ಹಾನಿಗೊಳಗಾದ ಉಡುಪಿ ಜಿಲ್ಲೆಯ ಪ್ರದೇಶಗಳಿಗೆ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಇಂದು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಕುಂದಾಪುರ ತಾಲೂಕಿನ ಪಡುತೋನ್ಸೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಗುಜ್ಜರಬೆಟ್ಟು ಗ್ರಾಮಕ್ಕೆ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಕಡಲ ಕೊರೆತದಿಂದ ಹಾನಿಗೊಳಗಾದ ಪ್ರದೇಶವನ್ನು ಪರಿಶೀಲನೆ ಮಾಡಿದರು.

ಹಾನಿಯ ಬಗ್ಗೆ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳಿಂದ ಮಾಹಿತಿ ಪಡೆದ ಜಿಲ್ಲಾ ಉಸ್ತುವಾರಿ ಸಚಿವೆ, ಮಳೆಯಿಂದ ಆಗಿರುವ ನಷ್ಟದ ಬಗ್ಗೆ ವರದಿ ನೀಡುವಂತೆ ಸೂಚನೆ ನೀಡಿದರು.

ಈ ವೇಳೆ ಉಡುಪಿ ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾಕುಮಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಕೆ.ಅರುಣ್, ಜಿಲ್ಲಾ ಪಂಚಾಯತ್ ಸಿಇಒ ಪ್ರತೀಕ್ ಬಯಲ್, ಕುಂದಾಪುರ ಎಸಿ ಎಸ್.ಆರ್. ರಶ್ಮಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

- Advertisement -

Latest News

error: Content is protected !!