Thursday, June 4, 2026
Homeಕರಾವಳಿಉಡುಪಿಉಡುಪಿ ಖಾಸಗಿ ಕಾಲೇಜಿನಲ್ಲಿ ವೀಡಿಯೋ ಚಿತ್ರೀಕರಣ ಪ್ರಕರಣ:ತಪ್ಪಿತಸ್ಥರ ವಿರುದ್ಧ ಕಾನೂನಿನಡಿ ಕ್ರಮ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಉಡುಪಿ ಖಾಸಗಿ ಕಾಲೇಜಿನಲ್ಲಿ ವೀಡಿಯೋ ಚಿತ್ರೀಕರಣ ಪ್ರಕರಣ:ತಪ್ಪಿತಸ್ಥರ ವಿರುದ್ಧ ಕಾನೂನಿನಡಿ ಕ್ರಮ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

- Advertisement -
- Advertisement -

ಬೆಂಗಳೂರು: ಉಡುಪಿಯ ಖಾಸಗಿ ಕಾಲೇಜಿನ ಶೌಚಾಲಯದಲ್ಲಿ ಮೊಬೈಲ್‌ ಇಟ್ಟು ವಿಡಿಯೋ ಚಿತ್ರೀಕರಣ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪಿಗಳ ವಿರುದ್ಧ ಕಾನೂನಿನಡಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಇಂದು ಪ್ರತಿಕ್ರಿಯೆ ನೀಡಿದ ಲಕ್ಷ್ಮೀ ಹೆಬ್ಬಾಳ್ಕರ್, ಪ್ರಕರಣ ಕುರಿತು ಮೂವರ ವಿರುದ್ಧ ಎಫ್ ಐಆರ್ ದಾಖಲಾಗಿದೆ. ಕಾನೂನಿನಡಿ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ತಿಳಿಸಿದ್ದಾರೆ.

ಕಾನೂನಿಗಿಂತ ಯಾರೂ ದೊಡ್ಡವರಲ್ಲ, ನನಗೆ ಮಾಹಿತಿ ಬಂದ ಪ್ರಕಾರ ಘಟನೆಗೆ ಸಂಬಂಧ ಪಟ್ಟಂತೆ ಯಾವುದೇ ವಿಡಿಯೋ ಕೂಡ ವೈರಲ್ ಆಗಿಲ್ಲ ಎಂದು ಸಚಿವೆ ಹೆಬ್ಬಾಳ್ಕರ್ ತಿಳಿಸಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

- Advertisement -

Latest News

error: Content is protected !!