Friday, June 5, 2026
Homeಕರಾವಳಿಉಡುಪಿಉಡುಪಿ; ಶಿರೂರು ದೋಣಿ ದುರಂತ ಪ್ರಕರಣ:ಮೃತರ ಕುಟುಂಬಕ್ಕೆ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್...

ಉಡುಪಿ; ಶಿರೂರು ದೋಣಿ ದುರಂತ ಪ್ರಕರಣ:ಮೃತರ ಕುಟುಂಬಕ್ಕೆ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪರಿಹಾರ ಘೋಷಣೆ

- Advertisement -
- Advertisement -

ಬೆಳಗಾವಿ: ಬೈಂದೂರು ತಾಲೂಕಿನ ಶಿರೂರು ಸಮೀಪ ಅರಬ್ಬಿ ಸಮುದ್ರದಲ್ಲಿ ದೋಣಿ ಮಗುಚಿ ಇಬ್ಬರು ಮೀನುಗಾರರು ಮೃತಪಟ್ಟಿರುವ ಘಟನೆಗೆ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ತೀವ್ರ ಸಂತಾಪ ಸೂಚಿಸಿದ್ದಾರೆ.

ದೋಣಿ ಅಪಘಾತದಲ್ಲಿ ಮೃತಪಟ್ಟ ಇಬ್ಬರು ಮೀನುಗಾರರ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡುವುದಾಗಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಘೋಷಿಸಿದ್ದಾರೆ.

ನವದೆಹಲಿ ಪ್ರವಾಸದಲ್ಲಿರುವ ಸಚಿವೆ ಹೆಬ್ಬಾಳ್ಕರ್, ಘಟನೆ ಕುರಿತಂತೆ ಉಡುಪಿ ಜಿಲ್ಲೆಯ ಹಿರಿಯ ಅಧಿಕಾರಿಗಳೊಂದಿಗೆ ಮಾತನಾಡಿ ಸಂಪೂರ್ಣ ಮಾಹಿತಿ ಪಡೆದಿದ್ದಾರೆ.

ಮೃತರ ಕುಟುಂಬದವರನ್ನು ಭೇಟಿಯಾಗಿ ಸಾಂತ್ವನ ಹೇಳುವಂತೆ ಮತ್ತು ಆದಷ್ಟು ಬೇಗ ಸೂಕ್ತ ಪರಿಹಾರ ನೀಡಲು ಕ್ರಮ ತೆಗೆದುಕೊಳ್ಳುವಂತೆ ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವರು ಸೂಚಿಸಿದ್ದಾರೆ.

- Advertisement -

Latest News

error: Content is protected !!