Friday, June 5, 2026
Homeಕರಾವಳಿಉಡುಪಿಉಡುಪಿ ಜಿಲ್ಲಾ ರಜತ ಮಹೋತ್ಸವ ಕಾರ್ಯಕ್ರಮದ ಲಾಂಛನ ಬಿಡುಗಡೆ

ಉಡುಪಿ ಜಿಲ್ಲಾ ರಜತ ಮಹೋತ್ಸವ ಕಾರ್ಯಕ್ರಮದ ಲಾಂಛನ ಬಿಡುಗಡೆ

- Advertisement -
- Advertisement -

ಉಡುಪಿ: ಉಡುಪಿ ಜಿಲ್ಲಾ ರಜತ ಮಹೋತ್ಸವ ಕಾರ್ಯಕ್ರಮದ ಲಾಂಛನವನ್ನು ಬಿಡುಗಡೆಗೊಂಡಿದೆ.

ಆಗಸ್ಟ್ 25 ರಂದು ಉಡುಪಿ ಜಿಲ್ಲೆಯ ರಜತ ಮಹೋತ್ಸವದ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ.

ಅಪರಾಹ್ನ 2.30 ರಿಂದ 3.30ರ ವರೆಗೆ ಬೋರ್ಡ್ ಹೈಸ್ಕೂಲಿನಿಂದ ಅಜ್ಜರಕಾಡು ಮಹಾತ್ಮಾ ಗಾಂಧಿ ಜಿಲ್ಲಾ ಕ್ರೀಡಾಂಗಣದವರೆಗೆ ಬೃಹತ್‌ ಮೆರವಣಿಗೆ ನಡೆಯಲಿದೆ.

ಅಪರಾಹ್ನ 3.30 ರಿಂದ ಸಂಜೆ 5 ಗಂಟೆಯವರೆಗೆ ಮಹಾತ್ಮಾ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ.

ಸಂಜೆ 5 ಗಂಟೆಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ರಜತ ಮಹೋತ್ಸವ ಕಾರ್ಯಕ್ರಮದ ಉದ್ಘಾಟನೆ ನಡೆಸಲಿದ್ದಾರೆ.

ಸಭಾ ಕಾರ್ಯಕ್ರಮದ ನಂತರ ಸಂಗೀತ ನಿರ್ದೇಶಕ ಅರ್ಜುನ್‌ ಜನ್ಯ ಮತ್ತು ಸರಿಗಮಪ ತಂಡದವರಿಂದ ಸಂಗೀತ ಕಾರ್ಯಕ್ರಮ ನಡೆಯಲಿದೆ.

- Advertisement -

Latest News

error: Content is protected !!