Wednesday, June 24, 2026
Homeಕರಾವಳಿಉಡುಪಿಉಡುಪಿ: ಇಬ್ಬರು ರೌಡಿ-ಶೀಟರ್‌ಗಳನ್ನು ಗಡಿಪಾರು ಮಾಡಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆದೇಶ

ಉಡುಪಿ: ಇಬ್ಬರು ರೌಡಿ-ಶೀಟರ್‌ಗಳನ್ನು ಗಡಿಪಾರು ಮಾಡಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆದೇಶ

- Advertisement -
- Advertisement -

ಉಡುಪಿ: ಇಬ್ಬರು ರೌಡಿ-ಶೀಟರ್‌ಗಳನ್ನು ಗಡಿಪಾರು ಮಾಡಿ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಂ ಶಂಕರ್ ಆದೇಶ ನೀಡಿದ್ದಾರೆ.

ಕಾಪು ಪೊಲೀಸ್ ಠಾಣಾ ವ್ಯಾಪ್ತಿಯ ಉದ್ಯಾವರ ಪಿತ್ರೋಡಿ ನಿವಾಸಿ ವಿಜೇತ್ ಮತ್ತು ಪಡುಬಿದ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ಮುದರಂಗಡಿ ನಿವಾಸಿ ಆರಿಫ್ ಸಾಹೇಬ್ ಗಡಿಪಾರು ಶಿಕ್ಷೆಗೆ ಒಳಗಾದವರು. ವಿಜೇತ್ ವಿರುದ್ಧ ಕೊಲೆ ಯತ್ನ ಹಾಗೂ ಹಲ್ಲೆ ಸೇರಿದಂತೆ ಒಟ್ಟು ನಾಲ್ಕು ಪ್ರಕರಣಗಳು ದಾಖಲಾಗಿದ್ದು, ಆತನನ್ನು ಉತ್ತರ ಕನ್ನಡ ಜಿಲ್ಲೆಯ ಕಾರವಾರಕ್ಕೆ ಗಡಿಪಾರು ಮಾಡಲಾಗಿದೆ.

ಮತ್ತೋರ್ವ ಆರೋಪಿ ಆರಿಫ್ ಸಾಹೇಬ್ ವಿರುದ್ಧ ಕೊಲೆ ಯತ್ನ, ಹಲ್ಲೆ ಹಾಗೂ ಮಾದಕ ದ್ರವ್ಯ ಸೇವನೆ ಸೇರಿದಂತೆ ಐದು ಗಂಭೀರ ಪ್ರಕರಣಗಳು ದಾಖಲಾಗಿದ್ದು, ಆತನನ್ನು ಚಿಕ್ಕಮಗಳೂರು ಜಿಲ್ಲೆಯಕೊಪ್ಪಕ್ಕೆ ಗಡಿಪಾರು ಮಾಡಲಾಗಿದೆ. “ಜಿಲ್ಲೆಯ ನಿವಾಸಿಗಳ ಸುರಕ್ಷತೆ ಮತ್ತು ಸಮಾಜವಿರೋಧಿ ಶಕ್ತಿಗಳ ನಿಗ್ರಹಕ್ಕಾಗಿ ಇಂತಹ ಕಠಿಣ ಕ್ರಮಗಳು ಅನಿವಾರ್ಯ” ಎಂದು ಪೊಲೀಸ್ ಇಲಾಖೆಯ ವಕ್ತಾರರು ತಿಳಿಸಿದ್ದಾರೆ.

- Advertisement -

Latest News

error: Content is protected !!