- Advertisement -
- Advertisement -
ಉಡುಪಿ: ಬಸ್ ಓಡಿಸುತ್ತಿರುವಾಗಲೇ ಚಾಲಕನಿಗೆ ಎದೆನೋವು ಕಾಣಿಸಿಕೊಂಡು ಬಸ್ ಇಳಿಜಾರಿಗೆ ಸಾಗಿ ನಿಂತ ಘಟನೆ ತೆಂಕ ಎರ್ಮಾಳಿನ ಮಸೀದಿ ಬಳಿ ನಡೆದಿದೆ.
ಮಂಗಳೂರಿನಿಂದ ಉಡುಪಿಯ ಕಡೆಗೆ ತೆರಳುತ್ತಿದ್ದ ಖಾಸಗಿ ಬಸ್ ಚಾಲಕ ಶಂಭು ಅವರಿಗೆ ತೆಂಕ ಎರ್ಮಾಳಿನ ಮಸೀದಿ ಬಳಿ ಬರುತ್ತಿದ್ದಂತೆ ಎದೆನೋವು ಕಾಣಿಸಿಕೊಂಡಿದೆ. ಪರಿಣಾಮ ಬಸ್ ಚಾಲಕನ ನಿಯಂತ್ರಣ ತಪ್ಪಿ ಇಳಿಜಾರಿಗೆ ಬಂದು ನಿಂತಿದೆ. ಘಟನೆಯಲ್ಲಿ ಬಸ್ ಚಾಲಕ ಹಾಗೂ ಇಬ್ಬರು ಪ್ರಯಾಣಿಕರಿಗೆ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.
- Advertisement -