- Advertisement -
![]()
- Advertisement -
ಬೆಳ್ತಂಗಡಿ : ಧರ್ಮಸ್ಥಳ ಪ್ರಕರಣ ಸಂಬಂಧ ಮಹೇಶ್ ಶೆಟ್ಟಿ ತಿಮರೋಡಿಯನ್ನು ಉಜಿರೆಯಿಂದ ವಶಕ್ಕೆ ಪಡೆದು ಉಡುಪಿ ಜಿಲ್ಲೆಗೆ ಕರೆದುಕೊಂಡು ಹೋಗುತ್ತಿರುವಾಗ ಉಡುಪಿ ಎಡಿಷನ್ ಎಸ್ಪಿಯ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿಪಡಿಸಿದ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೂವರು ಆರೋಪಿಗಳನ್ನು ಬಂಧಿಸಲಾಗಿದೆ.
ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಹೊಸ್ಮಾರ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಉಜಿರೆಯ ಮಹೇಶ್ ಶೆಟ್ಟಿ ತಿಮರೋಡಿಯನ್ನು ವಶಕ್ಕೆ ಪಡೆದುಕೊಂಡು ಹೋಗುತ್ತಿರುವಾಗ ಆ.21 ರಂದು ಬೆಳಗ್ಗೆ ಉಡುಪಿ ಜಿಲ್ಲೆಯ ಎಡಿಷನ್ ಎಸ್ಪಿ ಸುಧಾಕರ್ ಹೆಗ್ಡೆ ಕಾರನ್ನು ಬೆನ್ನಟ್ಟಿಕೊಂಡು ಬಂದು ಅಪಘಾತ ಮಾಡಿ ಕರ್ತವ್ಯಕ್ಕೆ ಅಡಿಪಡಿಸಿರುವ ಬಗ್ಗೆ ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಎಡಿಷನ್ ಎಸ್ಪಿ ಗನ್ ಮ್ಯಾನ್ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಾಗಿದೆ.
ಪ್ರಕರಣದ ಆರೋಪಿಗಳಾದ ಸೃಜನ್, ಹಿತೇಶ್, ಸಹಾನ್ ಎಂಬವರನ್ನು ಕಾರ್ಕಳ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ.
- Advertisement -


