Thursday, June 4, 2026
Homeಕರಾವಳಿಉಡುಪಿಉಡುಪಿ:ಎಂಗೇಜ್ ಮೆಂಟ್ ಆಗಿದ್ದ ಯುವತಿ ನೇಣಿಗೆ ಶರಣು

ಉಡುಪಿ:ಎಂಗೇಜ್ ಮೆಂಟ್ ಆಗಿದ್ದ ಯುವತಿ ನೇಣಿಗೆ ಶರಣು

- Advertisement -
- Advertisement -

ಉಡುಪಿ:ಎಂಗೇಜ್ ಮೆಂಟ್ ಆಗಿದ್ದ ಯುವತಿ ನೇಣಿಗೆ ಶರಣಾಗಿರುವ ಘಟನೆ ಉಡುಪಿ ತಾಲೂಕಿನ ದೆಂದೂರುಕಟ್ಟೆಯ ಇಂದ್ರಾಳಿಯಲ್ಲಿ ನಡೆದಿದೆ. ದೆಂದೂರುಕಟ್ಟೆಯ ಇಂದ್ರಾಳಿ ನಿವಾಸಿ ಕೀರ್ತನಾ ಶೆಟ್ಟಿ ಮೃತ ಯುವತಿ.

ಮೃತ ಯುವತಿ ಕೀರ್ತನಾ ಮಣಿಪುರದ ಬೆಳ್ಳೆ ವ್ಯವಸಾಯ ಸೇವಾ ಸಹಕಾರಿ ಸಂಘದಲ್ಲಿ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದರು. ಒಂದೂವರೆ ತಿಂಗಳ ಹಿಂದೆ ಎಂಗೇಜ್ ಮೆಂಟ್ ಆಗಿತ್ತು.  

ಕೀರ್ತನಾ  ಮನೆಯ ಕೋಣೆಯಲ್ಲಿ ಕುತ್ತಿಗೆಗೆ ಶಾಲು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದು, ಕೂಡಲೇ ಮನೆಯವರು ನೋಡಿ ಆಕೆಯನ್ನು ಕಾಪಾಡಿ ಅರೆ ಪ್ರಜ್ಞಾವಸ್ಥೆ ಸ್ಥಿತಿಯಲ್ಲಿದ್ದ ಆಕೆಯನ್ನು  ಆಸ್ಪತ್ರೆಗೆ ದಾಖಲಿಸಿದ್ದರು.ಆದರೆ ಚಿಕಿತ್ಸೆ ಫಲಿಸದೆ ಆಕೆ ಸಾವನ್ನಪ್ಪಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

- Advertisement -

Latest News

error: Content is protected !!