- Advertisement -
- Advertisement -
ಉಡುಪಿ: ಹಾವು ಕಡಿದು ಕೃಷಿಕ ಸಾವನ್ನಪ್ಪಿರುವ ಘಟನೆ ಕೆಮ್ಮಣ್ಣು ಸಮೀಪ ನಡೆದಿದೆ. ಪಡುತೋನ್ಸೆ ಗ್ರಾಮದ ಗುಜ್ಜರಬೆಟ್ಟು ನಿವಾಸಿ ಕೃಷಿಕ ಸುಂದರ ಪೂಜಾರಿ ಮೃತ ದುರ್ದೈವಿ,
ಸುಂದರ ಪೂಜಾರಿ ಶನಿವಾರ ಸಂಜೆ ತೋಟದಲ್ಲಿ ಕೃಷಿ ಚಟುವಟಿಕೆ ನಿರತರಾಗಿದ್ದಾಗ ಇವರಿಗೆ ವಿಷದ ಹಾವು ಕಚ್ಚಿತ್ತೆನ್ನಲಾಗಿದೆ. ಇದರಿಂದ ಗಂಭೀರವಾಗಿ ಅಸ್ವಸ್ಥಗೊಂಡ ಇವರು, ಮಣಿಪಾಲದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.
ಮೃರು ಪತ್ನಿ, ಓರ್ವ ಪುತ್ರ ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
- Advertisement -