Wednesday, June 24, 2026
Homeಕರಾವಳಿಉಡುಪಿಉಡುಪಿ; ಕಾಂಕ್ರೀಟ್ ಕೆಲಸಕ್ಕೆ ಕಾರ್ಮಿಕರನ್ನು ಕೊಂಡೊಯ್ಯುತ್ತಿದ್ದ ಗೂಡ್ಸ್ ಟೆಂಪೋ ಪಲ್ಟಿ; ಕಾಂಕ್ರೀಟ್ ಮಿಕ್ಸಿಂಗ್ ಯಂತ್ರದಡಿ ಸಿಲುಕಿ...

ಉಡುಪಿ; ಕಾಂಕ್ರೀಟ್ ಕೆಲಸಕ್ಕೆ ಕಾರ್ಮಿಕರನ್ನು ಕೊಂಡೊಯ್ಯುತ್ತಿದ್ದ ಗೂಡ್ಸ್ ಟೆಂಪೋ ಪಲ್ಟಿ; ಕಾಂಕ್ರೀಟ್ ಮಿಕ್ಸಿಂಗ್ ಯಂತ್ರದಡಿ ಸಿಲುಕಿ ಮಹಿಳೆ ಸಾವು

- Advertisement -
- Advertisement -

ಉಡುಪಿ; ಕಾಂಕ್ರೀಟ್ ಕೆಲಸಕ್ಕೆ ಕಾರ್ಮಿಕರನ್ನು ಕೊಂಡೊಯ್ಯುತ್ತಿದ್ದ ಗೂಡ್ಸ್ ಟೆಂಪೋ ಪಲ್ಟಿಯಾಗಿ ಕಾಂಕ್ರೀಟ್ ಮಿಕ್ಸಿಂಗ್ ಯಂತ್ರದಡಿ ಸಿಲುಕಿ ಮಹಿಳೆ ಸಾವನ್ನಪ್ಪಿರುವ ಘಟನೆ ಹೆಜಮಾಡಿ ಕನ್ನಂಗಾರು ಬ್ರಹ್ಮಬೈದರ್ಕಳ ಗರಡಿ ಎದುರು ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ನಡೆದಿದೆ. ಮೃತರನ್ನು ಲಿಂಗಪ್ಪಯ್ಯ ಕಾಡು ನಿವಾಸಿ ಪಾರ್ವತಿ ಎಂದು ಗುರುತಿಸಲಾಗಿದೆ.

ಸಾವಿತ್ರಮ್ಮ, ಮಹಂತೇಶ್ ಸಹಿತ 7 ಜನರು ಗಾಯಗೊಂಡಿದ್ದಾರೆ. ಮುಲ್ಕಿಯಿಂದ ಉಡುಪಿ ಕಡೆಗೆ ಸಾಗುತ್ತಿದ್ದ ಟೆಂಪೋದಲ್ಲಿ ಕಾಂಕ್ರೀಟ್ ಮಿಕ್ಸಿಂಗ್ ಯಂತ್ರ ಮತ್ತು ಪರಿಕರಗಳ ಸಹಿತ ಪುರುಷರು ಮತ್ತು ಮಹಿಳೆಯರಿದ್ದರು. ವೇಗವಾಗಿ ಸಾಗುತ್ತಿದ್ದ ವಾಹನದ ಟಯರ್ ಏಕಾಏಕಿ ಸ್ಫೋಟಗೊಂಡು ಚಾಲಕನ ನಿಯಂತ್ರಣ ಕಳೆದುಕೊಂಡ ಪರಿಣಾಮ ಮುಗುಚಿ ಬಿದ್ದಿದೆ.


ಮುಗುಚಿಬಿದ್ದ ಟೆಂಪೋದ ಅಡಿಯಲ್ಲಿ ಹಲವಾರು ಮಂದಿ ಸಿಲುಕಿದ್ದು, ಅವರನ್ನು ಸ್ಥಳೀಯರ ಸಹಾಯದಿಂದ ಹೊರ ತೆಗೆಯಲಾಗಿದೆ. ಈ ವೇಳೆ ಕಾಂಕ್ರೀಟ್ ಯಂತ್ರದಡಿ ಸಿಲುಕಿದ ಪಾರ್ವತಿ ಅವರನ್ನು ಹೊರತೆಗೆಯಲು ಸಾರ್ವಜನಿಕರು ಮತ್ತು ಟೋಲ್ ಸಿಬ್ಬಂದಿ ಹರಸಾಹಸಪಟ್ಟಿದ್ದಾರೆ.. ಹೆಜಮಾಡಿ ಟೋಲ್ ಅಂಬುಲೆನ್ಸ್ ಮತ್ತು ಕ್ರೇನ್ ತಕ್ಷಣ ಆಗಮಿಸಿ ಮಹಿಳೆಯನ್ನು ರಕ್ಷಿಸಲಾಯಿತು. ತೀವ್ರ ಗಾಯಗೊಂಡಿದ್ದ ಅವರನ್ನು ಟೋಲ್ ಅಂಬುಲೆನ್ಸ್ ಮೂಲಕ ಮುಕ್ಕದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಪಡುಬಿದ್ರಿ ಪೋಲಿಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ

- Advertisement -

Latest News

error: Content is protected !!