Wednesday, May 15, 2024
Homeಕರಾವಳಿಉಡುಪಿಉಡುಪಿ : ರಾಜ್ಯಾದ್ಯಂತ ಆಗಸ್ಟ್ 15 ರಂದು ಗೃಹಲಕ್ಷ್ಮೀ ಯೋಜನೆಗೆ ಚಾಲನೆ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್...

ಉಡುಪಿ : ರಾಜ್ಯಾದ್ಯಂತ ಆಗಸ್ಟ್ 15 ರಂದು ಗೃಹಲಕ್ಷ್ಮೀ ಯೋಜನೆಗೆ ಚಾಲನೆ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿಕೆ

spot_img
- Advertisement -
- Advertisement -

ಉಡುಪಿ : ರಾಜ್ಯಾದ್ಯಂತ ಆಗಸ್ಟ್ 15 ರಂದು ಗೃಹಲಕ್ಷ್ಮೀ ಯೋಜನೆಗೆ ಚಾಲನೆ ನೀಡಲಾಗುವುದು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರವು ಚುನಾವಣಾ ಅವಧಿಯಲ್ಲಿ ನೀಡಿದ ಉಳಿದ 4 ಗ್ಯಾರಂಟಿಗಳನ್ನು ಹಂತ ಹಂತವಾಗಿ ಈಡೇರಿಸಲಾಗುವುದು. ಗೃಹಲಕ್ಷ್ಮೀ ಯೋಜನೆಗೆ ರಾಜ್ಯಾದ್ಯಂತ ಆಗಸ್ಟ್ 15 ರಂದು ಚಾಲನೆ ನೀಡಲಾಗುವುದು. ರಾಜ್ಯದ ಬಿಪಿಎಲ್ ಮತ್ತು ಎಪಿಎಲ್ ನ ಎಲ್ಲಾ ಮಹಿಳೆಯರು ಇದರ ಪ್ರಯೋಜನ ಪಡೆಯಬಹುದಾಗಿದ್ದು, ಈ ಕುರಿತ ಅರ್ಜಿ ನಮೂನೆಯನ್ನು ಇನ್ನು 2 ದಿನಗಳಲ್ಲಿ ಬಿಡುಗಡೆ ಮಾಡಲಾಗುವುದು. ಆನ್ಲೈನ್ ಮೂಲಕ ಅಥವಾ ಸಿಡಿಪಿಓ ಗಳ ಮೂಲಕ ,ಅಂಗನವಾಡಿ ಶಿಕ್ಷಕರ ಮೂಲಕ ಹಾಗೂ ಗ್ರಾಮ ಒನ್ ಮೂಲಕ ಸಹ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗುವುದು ಎಂದರು.

ಉಡುಪಿ ಜಿಲ್ಲೆಯ ಉಸ್ತುವಾರಿ ಸಚಿವೆಯಾಗಿ, ಜಿಲ್ಲೆಯ ಪರಿಸ್ಥಿತಿಯ ಬಗ್ಗೆ ಜಿಲ್ಲಾಧಿಕಾರಿ ಮತ್ತು ಇತರೇ ಅಧಿಕಾರಿಗಳೊಂದಿಗೆ ಚರ್ಚಿಸಿದ್ದು, ಜಿಲ್ಲೆಯ ಎಲ್ಲಾ ಸಾರ್ವಜನಿಕರು ಮತ್ತು ಎಲ್ಲಾ ಪಕ್ಷಗಳ ಸಹಕಾರದಿಂದ , ಬಸವಣ್ಣ ಅವರ ಕಾಯಕವೇ ಕೈಲಾಸ ಹಾಗೂ ದಯಯೇ ಧರ್ಮದ ಮೂಲ ಸಂದೇಶದಂತೆ ತಾನು ಕಾರ್ಯನಿರ್ವಹಿಸಲಿದ್ದೇನೆ. ಜಿಲ್ಲಾಡಳಿತವು ಜಿಲ್ಲೆಯ ಜನರ ಸಮಸ್ಯೆಗಳಿಗೆ 24 ಗಂಟೆಗಳ ಕಾಲ ಸದಾ ಸ್ಪಂದಿಸುವಂತೆ ಮತ್ತು ಎಲ್ಲಾ ಅಧಿಕಾರಿಗಳು ತಮ್ಮ ಜವಾಬ್ದಾರಿಗಳನ್ನು ಅರಿತು ಕಾರ್ಯನಿರ್ವಹಿಸುವಂತೆ ಹಾಗೂ ಜಿಲ್ಲೆಯ ಪ್ರಗತಿಗೆ ಎಲ್ಲಾ ರೀತಿಯ ಸಂಪೂರ್ಣ ಸಹಕಾರ ನೀಡುವುದಾಗಿ ಸಚಿವರು ತಿಳಿಸಿದ್ದಾರೆ.

- Advertisement -
spot_img

Latest News

error: Content is protected !!