Saturday, June 6, 2026
Homeಕರಾವಳಿಉಡುಪಿಕಾಪು ಕ್ಷೇತ್ರದ ಬಿಜೆಪಿ ಶಾಸಕ ಲಾಲಾಜಿ ಆರ್. ಮೆಂಡನ್ ರಿಗೆ ಕೊರೊನಾ ಪಾಸಿಟಿವ್

ಕಾಪು ಕ್ಷೇತ್ರದ ಬಿಜೆಪಿ ಶಾಸಕ ಲಾಲಾಜಿ ಆರ್. ಮೆಂಡನ್ ರಿಗೆ ಕೊರೊನಾ ಪಾಸಿಟಿವ್

- Advertisement -
- Advertisement -

ಉಡುಪಿ: ಜಿಲ್ಲೆಯ ಕಾಪು ಕ್ಷೇತ್ರದ ಬಿಜೆಪಿ ಶಾಸಕ ಲಾಲಾಜಿ ಆರ್. ಮೆಂಡನ್ ಅವರಿಗೆ ಕೊರೊನಾ ಸೋಂಕು ದೃಢಗೊಂಡಿದೆ. ಸ್ವತಃ ಶಾಸಕರೇ ಈ ವಿಷಯವನ್ನು ತಮ್ಮ ಫೇಸ್ಬುಕ್ ಪೇಜ್ ಮೂಲಕ ದೃಢಪಡಿಸಿದ್ದಾರೆ.

ನನ್ನ ಆಪ್ತ ಕಾರ್ಯದರ್ಶಿಯೋರ್ವರಿಗೆ ಕೋವಿಡ್ 19 ಪಾಸಿಟಿವ್ ಬಂದ ಹಿನ್ನಲೆ ಕಳೆದ 7 ದಿನಗಳಿಂದ ಹೋಂ ಕಾರಂಟೈನ್ ನಲ್ಲಿದ್ದು ಮುಂಜಾಗೃತಾ ಕ್ರಮವಾಗಿ…

Posted by Lalaji R Mendon on Thursday, 13 August 2020

ಕೆಲವು ದಿನಗಳ ಹಿಂದೆ ಶಾಸಕರ ಆಪ್ತ ಕಾರ್ಯದರ್ಶಿಗೆ ಕೊರೊನಾ ಸೋಂಕು ತಗುಲಿತ್ತು. ಈ ಹಿನ್ನೆಲೆಯಲ್ಲಿ ಲಾಲಾಜಿ ಆರ್. ಮೆಂಡನ್ ಹೋಮ್ ಕ್ವಾರಂಟೈನ್ ನಲ್ಲಿದ್ದರು. ಅವರ ಗಂಟಲದ್ರವ ಪರೀಕ್ಷೆಗೆ ಒಳಪಡಿಸಿದಾಗ ಸೋಂಕು ತಗುಲಿದ್ದು ದೃಢಗೊಂಡಿದೆ.

ಆದರೆ ತಮಗೆ ಯಾವುದೇ ರೋಗ ಲಕ್ಷಣಗಳಿಲ್ಲ, ಹೀಗಾಗಿ ಕೋವಿಡ್ ಕೇರ್ ಸೆಂಟರ್ ನಲ್ಲಿ ಚಿಕಿತ್ಸೆ ಪಡೆಯುತ್ತೇನೆ. ಕಾಪು ಕ್ಷೇತ್ರದ ಜನತೆ ಅಗತ್ಯ ಕೆಲಸಗಳಿಗಾಗಿ ಕಚೇರಿಯನ್ನು ಸಂಪರ್ಕಿಸಿ. ಶೀಘ್ರ ನಿಮ್ಮ ಸೇವೆ ಮಾಡಲು ಮರಳುತ್ತೇನೆ ಎಂದು ಹೇಳಿದ್ದಾರೆ.

- Advertisement -

Latest News

error: Content is protected !!