- Advertisement -


- Advertisement -
ಉಡುಪಿ: ಕೇರಳ ಮುಖ್ಯಮಂತ್ರಿ ವಿ.ಡಿ. ಸತೀಶನ್ ಇಂದು ಮುಂಜಾನೆ ಕೊಲ್ಲೂರು ಮೂಕಾಂಬಿಕೆಯ ದರ್ಶನ ಪಡೆದಿದ್ದಾರೆ.
Z-ಪ್ಲಸ್ ಭದ್ರತೆಯಲ್ಲಿ ಅವರು ದೇವಸ್ಥಾನಕ್ಕೆ ಆಗಮಿಸಿದ ಅವರು ಮುಂಜಾನೆಯೇ ದೇವಿಗೆ ವಿಶೇಷ ಪೂಜೆ ಸಲ್ಲಿಸಿ ಆಶೀರ್ವಾದ ಪಡೆದರು. ಬಳಿಕ ದೇವಾಲಯದ ಆಡಳಿತ ಮಂಡಳಿಯವರು ಅವರನ್ನು ಸನ್ಮಾನಿಸಿದರು.
ಸತೀಶನ್ ಅವರು ಸಿಎಂ ಆದ ಬಳಿಕ ಕೊಲ್ಲೂರಿಗೆ ಇದು ಮೊದಲ ಭೇಟಿ ಇದಾಗಿದೆ. ಅವರು ಕೊಲ್ಲೂರು ಮೂಕಾಂಬಿಕೆಯ ಅಪಾರ ಭಕ್ತರಾಗಿದ್ದಾರೆ. ಪೂಜೆ ಬಳಿಕ ಮಂಗಳೂರು ಮೂಲಕ ಬೆಂಗಳೂರಿಗೆ ಪ್ರಯಾಣ ಬೆಳೆಸಿದರು. ಸತೀಶನ್ ಅವರು ಆಗಮಿಸಿದ್ದ ಹಿನ್ನೆಲೆ ಕ್ಷೇತ್ರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿತ್ತು.
- Advertisement -


