Friday, June 5, 2026
Homeಕರಾವಳಿಉಡುಪಿಉಡುಪಿ: ಮದುವೆಯಾಗುವುದಾಗಿ ನಂಬಿಸಿ ವಕೀಲನಿಂದ ಅತ್ಯಾಚಾರ, ಪ್ರಕರಣ ದಾಖಲಾಗುತ್ತಿದ್ದಂತೆ ಆರೋಪಿ ಪರಾರಿ !

ಉಡುಪಿ: ಮದುವೆಯಾಗುವುದಾಗಿ ನಂಬಿಸಿ ವಕೀಲನಿಂದ ಅತ್ಯಾಚಾರ, ಪ್ರಕರಣ ದಾಖಲಾಗುತ್ತಿದ್ದಂತೆ ಆರೋಪಿ ಪರಾರಿ !

- Advertisement -
- Advertisement -

ಉಡುಪಿ: ನಗರದಲ್ಲಿ ವಕೀಲನಾಗಿರುವ ಸುಕುಮಾರ್ ಶೆಟ್ಟಿ ಎಂಬಾತ ಯುವತಿಯೊಬ್ಬಳನ್ನು ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ಎಸಗಿರುವ ಆರೋಪದಡಿ ಉಡುಪಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕೋಟ ಪೊಲೀಸ್ ಠಾಣಾ ವ್ಯಾಪ್ತಿಯ ಕಾವಾಡಿ ನಿವಾಸಿಯಾಗಿರುವ ಸುಕುಮಾರ್ ಶೆಟ್ಟಿ ಕೆಲವು ವರ್ಷಗಳಿಂದ ಅದೇ ಗ್ರಾಮದ 25ರ ಹರೆಯದ ಯುವತಿಯನ್ನು ಪ್ರೀತಿಸುತ್ತಿದ್ದನು. ಮುಂದೆ ಮದುವೆಯಾಗುವುದಾಗಿ ನಂಬಿಸಿ ಆಕೆಯೊಂದಿಗೆ ಹಲವು ಬಾರಿ ಒತ್ತಾಯಪೂರ್ವಕವಾಗಿ ದೈಹಿಕ ಸಂಪರ್ಕ ನಡೆಸಿದ್ದನು ಎಂದು ದೂರಲಾಗಿದೆ.

ಯುವತಿ ನೀಡಿದ ದೂರಿನಂತೆ ಸುಕುಮಾರ್ ಶೆಟ್ಟಿ ವಿರುದ್ಧ ಮಹಿಳಾ ಠಾಣೆ ಯಲ್ಲಿ ಐಪಿಸಿ 376, 417, 323ರಂತೆ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ. ಆರೋಪಿ ತಲೆಮರೆಸಿಕೊಂಡಿದ್ದು, ಶೋಧ ಕಾರ್ಯ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

- Advertisement -

Latest News

error: Content is protected !!