Wednesday, June 24, 2026
Homeಕರಾವಳಿಉಡುಪಿಉಡುಪಿ: ಲಾರಿಗೆ ಸ್ಕೂಟರ್ ಗೆ ಡಿಕ್ಕಿ; ಸ್ಕೂಟರ್ ಸವಾರ ಸಾವು

ಉಡುಪಿ: ಲಾರಿಗೆ ಸ್ಕೂಟರ್ ಗೆ ಡಿಕ್ಕಿ; ಸ್ಕೂಟರ್ ಸವಾರ ಸಾವು

- Advertisement -
- Advertisement -

ಉಡುಪಿ: ಲಾರಿಗೆ ಸ್ಕೂಟರ್ ಗೆ ಡಿಕ್ಕಿಯಾಗಿ ಸ್ಕೂಟರ್ ಸವಾರ ಸಾವನ್ನಪ್ಪಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಮೂಡಬೆಟ್ಟು ಗ್ರಾಮದ ಬೃಂದಾವನ ಹೋಟೆಲ್ ಬಳಿ ಸೋಮವಾರ ಸಂಜೆ ಸಂಭವಿಸಿದೆ. ಭೀಮಪ್ಪ ಹುನ್ನಳ್ಳಿ ಮೃತರು. ಅಪಘಾತದಲ್ಲಿ ಸಹ ಸವಾರನಿಗೆ ಗಾಯಗಳಾಗಿವೆ.


ಏಪ್ರಿಲ್ 20ರಂದು ಸಂಜೆ 4 ಗಂಟೆ ಸುಮಾರಿಗೆ ಉಡುಪಿ ಕಡೆಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಲಾರಿ ಚಾಲಕನು, ತನ್ನ ವಾಹನವನ್ನು ಅತೀ ವೇಗ ಮತ್ತು ನಿರ್ಲಕ್ಷ್ಯದಿಂದ ಚಲಾಯಿಸಿ ಸ್ಕೂಟರ್‌ಗೆ ಡಿಕ್ಕಿ ಹೊಡೆದಿದ್ದಾನೆ. ಡಿಕ್ಕಿಯ ರಭಸಕ್ಕೆ ಸ್ಕೂಟರ್ ಸವಾರ ಭೀಮಪ್ಪ ಮತ್ತು ಸಹ ಸವಾರ ಸಾಗರ್ ಅವರು ಡಿವೈಡರ್‌ಗೆ ಅಪ್ಪಳಿಸಿ ಬಿದ್ದಿದ್ದಾರೆ. ಅಪಘಾತದ ಬಳಿಕ ಸ್ಥಳೀಯರು ಗಾಯಾಳುಗಳನ್ನು ಉಡುಪಿಯ ಆದರ್ಶ ಆಸ್ಪತ್ರೆಗೆ ದಾಖಲಿಸಿದರು. ಆದರೆ, ಪರೀಕ್ಷಿಸಿದ ವೈದ್ಯರು ಭೀಮಪ್ಪ ಅವರು ಈಗಾಗಲೇ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಗಾಯಾಳು ಸಾಗರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಸಂಬಂಧ ಕಾಪು ಪೊಲೀಸ್ ಠಾಣೆಯಲ್ಲಿ ಲಾರಿ ಚಾಲಕನ ವಿರುದ್ಧ ಬಿಎನ್‌ಎಸ್ (BNS) ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!