Sunday, November 8, 2026
Homeಕರಾವಳಿಉಡುಪಿಉಡುಪಿ:ಸೈಕಲ್‌ನಿಂದ ಬಿದ್ದು ಗಾಯಗೊಂಡಿದ್ದ ವ್ಯಕ್ತಿ ಸಾವು

ಉಡುಪಿ:ಸೈಕಲ್‌ನಿಂದ ಬಿದ್ದು ಗಾಯಗೊಂಡಿದ್ದ ವ್ಯಕ್ತಿ ಸಾವು

- Advertisement -
- Advertisement -

ಪಡುಬಿದ್ರಿ: ಸೈಕಲ್‌ನಿಂದ ಬಿದ್ದು ತಲೆಗೆ ಗಂಭೀರ ಗಾಯಗೊಂಡಿದ್ದ ಸವಾರನೊಬ್ಬ ಮಾರ್ಗಮಧ್ಯೆ ಮೃತಪಟ್ಟ ಘಟನೆ ಶನಿವಾರ ಪಣಿಯೂರು ಪೇಟೆಯಲ್ಲಿ ಸಂಭವಿಸಿದೆ. ಬೆಳಪು ದರ್ಖಾಸು ನಿವಾಸಿ ವಿಶ್ವನಾಥ (47) ಮೃತಪಟ್ಟವರು.

ಸೈಕಲ್‌ನಲ್ಲಿ ಮನೆಗೆ ತೆರಳುತ್ತಿದ್ದ ವೇಳೆ ಪಣಿಯೂರು ಪೇಟೆ ಬಳಿ ನಿಯಂತ್ರಣ ತಪ್ಪಿ ರಸ್ತೆಗೆ ಬಿದ್ದು ವಿಶ್ವನಾಥ್ ಅವರ ತಲೆಗೆ ತೀವ್ರ ಗಾಯವಾಗಿತ್ತು. ತಕ್ಷಣ ಸ್ಥಳೀಯರು ಹಾಗೂ ಉಚ್ಚಿಲದ ಸಮಾಜ ಸೇವಕರಾದ ಜಲಾಲುದ್ದೀನ್ ಮತ್ತು ಹಮೀದ್ ಅವರು ಗಾಯಾಳುವನ್ನು ಆಸ್ಪತ್ರೆಗೆ ಕರೆದೊಯ್ಯಲು ಯತ್ನಿಸಿದರಾದರೂ, ಮಾರ್ಗಮಧ್ಯೆಯೇ ಅವರು ಕೊನೆಯುಸಿರೆಳೆದಿದ್ದಾರೆ.

ಘಟನಾ ಸ್ಥಳಕ್ಕೆ ಪಡುಬಿದ್ರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

- Advertisement -

Latest News

error: Content is protected !!