Tuesday, June 30, 2026
Homeಕರಾವಳಿಉಡುಪಿಉಡುಪಿ: ಪಡುಬಿದ್ರೆಯಲ್ಲಿ ಕಾರು ಡಿಕ್ಕಿಯಾಗಿ ವ್ಯಕ್ತಿ ಸಾವು

ಉಡುಪಿ: ಪಡುಬಿದ್ರೆಯಲ್ಲಿ ಕಾರು ಡಿಕ್ಕಿಯಾಗಿ ವ್ಯಕ್ತಿ ಸಾವು

- Advertisement -
- Advertisement -

ಉಡುಪಿ: ಕಾರು ಡಿಕ್ಕಿಯಾಗಿ ವ್ಯಕ್ತಿ ಸಾವನ್ನಪ್ಪಿರುವ ಘಟನೆ ಪಡುಬಿದ್ರೆಯಲ್ಲಿ ನಡೆದಿದೆ. ಕೆಳಗಿನ ಪೇಟೆಯ ಫ್ಯಾನ್ಸಿ ಅಂಗಡಿಯ ಮಾಲೀಕ ಶೇಖರ ಶೆಟ್ಟಿಗಾರ್‌ (65) ಮೃತ ವ್ಯಕ್ತಿ.

ಉಡುಪಿ ಜಿಲ್ಲೆಯ ಪಡುಬಿದ್ರಿ ಪೊಲೀಸ್‌ ಠಾಣೆ ವ್ಯಾಪ್ತಿಯ ಬಂಟರ ಸಂಘದ ಎದುರು ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರು ಢಿಕ್ಕಿ ಹೊಡೆದು ಶೇಖರ ಶೆಟ್ಟಿಗಾರ್‌ ಸಾವನ್ನಪ್ಪಿದ್ದಾರೆ.

ಶೇಖರ ಶೆಟ್ಟಿಗಾರ್‌  ಅವರಿಗೆ ಮಂಗಳೂರು ಕಡೆಯಿಂದ ಉಡುಪಿಯತ್ತ ಸಾಗುತ್ತಿದ್ದ ಕಾರು ಢಿಕ್ಕಿ ಹೊಡೆದಿದೆ. ಕಾರು ಪಕ್ಕದ ಚರಂಡಿಗೆ ಮಗುಚಿ ಬಿದ್ದಿದೆ. ಶೇಖರ ಅವರು ನಡೆದುಕೊಂಡು ಹೋಗುತ್ತಿದ್ದರು. ತೀವ್ರ ಗಾಯಗೊಂಡ ಅವರನ್ನು ಆಸ್ಪತ್ರೆಗೆ ಸಾಗಿಸುವ ಹಾದಿಯಲ್ಲಿ ಮೃತಪಟ್ಟಿದ್ದಾರೆ. ಕಾರು ಚಾಲಕ ಸಣ್ಣ ಪುಟ್ಟ ಗಾಯದೊಂದಿಗೆ ಪಾರಾಗಿದ್ದಾನೆ.ಪಡುಬಿದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!