Wednesday, June 3, 2026
Homeಕರಾವಳಿಉಡುಪಿಉಡುಪಿ, ಮಂಗಳೂರನ್ನು ತಾಲಿಬಾನ್ ಮಾಡಲು ಬಿಡಲ್ಲ: ಸುನಿಲ್ ಕುಮಾರ್

ಉಡುಪಿ, ಮಂಗಳೂರನ್ನು ತಾಲಿಬಾನ್ ಮಾಡಲು ಬಿಡಲ್ಲ: ಸುನಿಲ್ ಕುಮಾರ್

- Advertisement -
- Advertisement -

ಬೆಂಗಳೂರು: ಕರಾವಳಿಯಲ್ಲಿ ಮತೀಯ ಕೆಲಸ ವಿಜೃಂಬಿಸಲು ಕೆಲ ಸಂಘಟನೆಗಳು ವಿವಾದ ಸೃಷ್ಟಿಸುತ್ತಿದೆ. ಇದಕ್ಕಾಗಿ ಶಿಕ್ಷಣ ಮತ್ತು ಯುವ ಜನಾಂಗದ ಮಧ್ಯೆ ವಿಷ ಬೀಜ ಬಿತ್ತುವ ಕೆಲಸ ಮಾಡುತ್ತಿವೆ ಎಂದು ಸಚಿವ ಸುನಿಲ್ ಕುಮಾರ್ ಆರೋಪಿಸಿದ್ದಾರೆ.

ಮಾಧ್ಯಮದೊಂದಿಗೆ ಮಾತನಾಡಿದ ಅವರು, ಸಮವಸ್ತ್ರ ಎಂಬುದು ಅದೊಂದು ನಿಯಮವಲ್ಲ, ಅದೊಂದು ಸಂಪ್ರದಾಯ, ಉಡುಪಿ, ಮಂಗಳೂರನ್ನು ತಾಲಿಬಾನ್ ಮಾಡಲು ಬಿಡಲ್ಲ ಇದೇ ವೇಳೆ ಎಚ್ಚರಿಕೆ ನೀಡಿದ್ದಾರೆ.

ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಮಾಜಿ ಸಿಎಂ ಸಿದ್ದರಾಮಯ್ಯ ಎಲ್ಲ ಸಮಯದಲ್ಲೂ ಮತೀಯ ದೃಷ್ಟಿಯಲ್ಲಿ ಯೋಚಿಸುತ್ತಾರೆ. ಜಾತಿಗಳ ನಡುವೆ ವಿಷ ಬೀಜ ಬಿತ್ತುತ್ತಾರೆ. ಅದರ ಮುಂದುವರೆದ ಭಾಗವಾಗಿಯೇ ಹಿಜಾಬ್ ವಿವಾದ ಸೃಷ್ಟಿಯಾಗಿದೆ. ಹಿಜಾಬ್ ವಿವಾದದ ಹಿಂದೆ ಇಸ್ಲಾಂ ಸಂಘಟನೆ ಕೈವಾಡ ಇದೆಯೇ ಅಥವಾ ಸಿದ್ದರಾಮಯ್ಯ, ಖಾದರ್ ಕೈವಾಡವಿದೆ ಎಂಬ ಅನುಮಾನ ಕಾಡುತ್ತಿದೆ ಎಂದು ಹೇಳಿದ್ದಾರೆ.

- Advertisement -

Latest News

error: Content is protected !!