Wednesday, June 3, 2026
Homeಕರಾವಳಿಉಡುಪಿಬೆಂಗಳೂರಿನಲ್ಲಿ ಶಾಲೆಗಳಿಗೆ ಬಾಂಬ್ ಬೆದರಿಕೆ ವಿಚಾರವಾಗಿ ಕೇಂದ್ರ ಗೃಹ ಸಚಿವರಿಗೆ ಪತ್ರ:ಉಡುಪಿ ಶಾಸಕ ಯಶಪಾಲ್ ಸುವರ್ಣ...

ಬೆಂಗಳೂರಿನಲ್ಲಿ ಶಾಲೆಗಳಿಗೆ ಬಾಂಬ್ ಬೆದರಿಕೆ ವಿಚಾರವಾಗಿ ಕೇಂದ್ರ ಗೃಹ ಸಚಿವರಿಗೆ ಪತ್ರ:ಉಡುಪಿ ಶಾಸಕ ಯಶಪಾಲ್ ಸುವರ್ಣ ಹೇಳಿಕೆ

- Advertisement -
- Advertisement -

ಉಡುಪಿ: ಬೆಂಗಳೂರಿನಲ್ಲಿ ಶಾಲೆಗಳಿಗೆ ಬಾಂಬ್ ಬೆದರಿಕೆ ವಿಚಾರವಾಗಿ ಮಧ್ಯ ಪ್ರವೇಶ ಮಾಡುವಂತೆ ಕೇಂದ್ರ ಗೃಹ ಸಚಿವರಿಗೆ ಪತ್ರ ಬರೆಯುವುದಾಗಿ ಉಡುಪಿ ಶಾಸಕ ಯಶಪಾಲ್ ಸುವರ್ಣ ಹೇಳಿದ್ದಾರೆ.

ಉಡುಪಿಯಲ್ಲಿ‌ ಪ್ರತಿಕ್ರಿಯೆ ನೀಡಿದ ಯಶಪಾಲ್ ಸುವರ್ಣ, ರಾಜ್ಯದ ಗುಪ್ತಚರ ಇಲಾಖೆ ಮತ್ತು ಗೃಹ ಇಲಾಖೆ ಸಂಪೂರ್ಣ ವೈಫಲ್ಯ ಆಗಿದ್ದು,
ಕಳೆದ ಆರು ತಿಂಗಳಿಂದ ಅಪರಾಧಿ ಸ್ಥಾನದಲ್ಲಿ ಇರುವ ವರನ್ನು ರಕ್ಷಿಸಲಾಗುತ್ತಿದೆ ಎಂದು ಆರೋಪಿಸಿದ್ದಾರೆ.

ಅಲ್ಲದೇ, ಕಾನೂನು ಬಾಹಿರ ಕೃತ್ಯ ಎಸಗುವಂತಹ ಸಂಘಟನೆಗಳು ಸರ್ಕಾರದ ಅಂಗವಾಗಿದೆ ಎಂದು ಗಂಭೀರವಾಗಿ ಆರೋಪ ಮಾಡಿರುವ ಶಾಸಕ ಸುವರ್ಣ, ಕ್ರಿಮಿನಲ್ ಕೇಸ್ ಗಳನ್ನು ವಾಪಸ್ ತೆಗೆದು ಮತ್ತಷ್ಟು ಇಂತಹ ಕೃತ್ಯಗಳಿಗೆ ರಾಜ್ಯ ಸರ್ಕಾರ ಅವಕಾಶ ಮಾಡಿಕೊಡುತ್ತಿದೆ ಎಂದು ಹೇಳಿದ್ದಾರೆ.

ಬೆಳಗಾವಿ ಅಧಿವೇಶನದಲ್ಲಿ ಈ ಬಗ್ಗೆ ನಾನು ಚರ್ಚೆ ಮಾಡುತ್ತೇನೆ ಎಂದು ಹೇಳಿರುವ ಯಶಪಾಲ್ ಸುವರ್ಣ, ಒಂದು ಕೋಮಿನ ವೋಟಿಗಾಗಿ ಕಾಂಗ್ರೆಸ್ ಪಕ್ಷ ಯಾವ ಮಟ್ಟಕ್ಕೆ ಬೇಕಾದರೂ ಇಳಿಯುತ್ತದೆ ಎಂದಿದ್ದಾರೆ.

- Advertisement -

Latest News

error: Content is protected !!