ಉಡುಪಿ; ಸ್ನೇಹಿತರ ನಡುವಿನ ಎಣ್ಣೆ ಪಾರ್ಟಿ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಬ್ರಹ್ಮಾವರ ತಾಲೂಕಿನ ಕೋಟತಟ್ಟು ಪಡುಕರೆಯ ಐದು ಸೆಂಟ್ಸ್ ಬಳಿ ಭಾನುವಾರ ತಡರಾತ್ರಿ ನಡೆದಿದೆ. ಪಡುಕರೆ ಸಂತೋಷ್ ಮೊಗವೀರ (30) ಕೊಲೆಯಾದವರು.
ಯುವಕರೆಲ್ಲಾ ಸೇರಿ ಭಾನುವಾರ ರಾತ್ರಿ ಎಣ್ಣೆ ಪಾರ್ಟಿ ಮಾಡಿದ್ದರು. ಈ ವೇಳೆ ಮಾತಿನಚಕಮಕಿ ನಡೆದಿದ್ದು, ಬಳಿಕ ಹೊಡೆದಾಡಿಕೊಂಡಿದ್ದಾರೆ. ಈ ವೇಳೆ ಸಂತೋಷ ಮೊಗವೀರ ಸ್ಥಳದಲ್ಲೇ ಕುಸಿದು ಬಿದ್ದಿದ್ದಾರೆ. ತಕ್ಷಣ ಸ್ಥಳೀಯರ ಸಹಕಾರದಿಂದ ಬ್ರಹ್ಮಾವರ ಖಾಸಗಿ ಆಸ್ಪತ್ರೆಗೆ ಸೇರಿಸಿದ್ದಾರೆ ಆದರೆ ಚಿಕಿತ್ಸೆ ಫಲಿಸದೆ ಸಂತೋಷ್ ಮೃತ ಪಟ್ಟಿದ್ದಾರೆ ಎನ್ನಲಾಗಿದೆ.
ಘಟನಾ ಸ್ಥಳಕ್ಕೆ ಬ್ರಹ್ಮಾವರ ವೃತ್ತ ನಿರೀಕ್ಷಕರಾದ ಗೋಪಿಕೃಷ್ಣ ಕೋಟ ಠಾಣೆಯ ಉಪನಿರೀಕ್ಷಕರಾದ ಪ್ರವೀಣ್ ಕುಮಾರ್ ಟಿ ಹಾಗೂ ಠಾಣಾ ಎಸ್ಸೆ ಮಾಂತೇಶ್ ಜಾಭಗೌಡ ಆಗಮಿಸಿ ಪರಿಶೀಲಿನೆ ನಡೆಸಿದ್ದಾರೆ. ಸಂಬಂಧಿಕರು ಇನ್ನಷ್ಟೆ ದೂರು ನೀಡಬೇಕಿದ್ದು, ಅನಂತರ ತನಿಖೆ ನಡೆಸಿ ಕ್ರಮಕೈಗೊಳ್ಳುತ್ತೇವೆ ಎಂದು ಪೊಲೀಸರು ತಿಳಿಸಿದ್ದಾರೆ. ಹೀಗಾಗಿ ಪ್ರಕರಣದ ಬಗ್ಗೆ ಇನ್ನಷ್ಟೇ ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ. ಘಟನೆಗೆ ಸಂಬಂಧಿಸಿದಂತೆ ನಾಲ್ವರು ಯುವಕರನ್ನು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ. ನಾಲ್ವರು ಯುವಕರನ್ನು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ.


