Thursday, June 4, 2026
Homeಕರಾವಳಿಉಡುಪಿಉಡುಪಿ; ತೆಂಗಿನಮರಕ್ಕೆ ಆಟೋ ರಿಕ್ಷಾ ಡಿಕ್ಕಿಯಾಗಿ ಪ್ರಯಾಣಿಕ ಸಾವು

ಉಡುಪಿ; ತೆಂಗಿನಮರಕ್ಕೆ ಆಟೋ ರಿಕ್ಷಾ ಡಿಕ್ಕಿಯಾಗಿ ಪ್ರಯಾಣಿಕ ಸಾವು

- Advertisement -
- Advertisement -

ಉಡುಪಿ;  ತೆಂಗಿನಮರಕ್ಕೆ ಆಟೋ ರಿಕ್ಷಾ ಡಿಕ್ಕಿಯಾಗಿ ಪ್ರಯಾಣಿಕ ಸಾವನ್ನಪ್ಪಿರುವ ಘಟನೆ ಗಂಗೊಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ತ್ರಾಸಿ ಗ್ರಾಮದ ಆನಗೋಡು ಸಮೀಪದ ತ್ರಾಸಿ-ಮೊವಾಡಿ ರಸ್ತೆಯಲ್ಲಿ ನಡೆದಿದೆ.

ಚಾಲಕ ಅತೀ ವೇಗವಾಗಿ ಬಂದು ಒಮ್ಮೆಲೆ ಬ್ರೇಕ್ ಹಾಕಿದ ಪರಿಣಾಮ ರಿಕ್ಷಾ ನಿಯಂತ್ರಣ ತಪ್ಪಿ ರಸ್ತೆಯ ಬದಿಯ ತೆಂಗಿನ ಮರಕ್ಕೆ ಡಿಕ್ಕಿ ಹೊಡೆದಿದೆ.ಪರಿಣಾಮ ಹಿಂದೆ ಕೂತಿದ್ದ  ಕುಂದಾಪುರದ ನಿವಾಸಿ ಭಾಸ್ಕರ (33) ಗಂಭೀರ ಗಾಯಗೊಂಡಿದ್ದಾರೆ.  

ಭಾನುವಾರ ತಡರಾತ್ರಿ ವೇಳೆಗೆ ತ್ರಾಸಿ ಸಮೀಪದ ಮೊವಾಡಿ-ತ್ರಾಸಿ ರಸ್ತೆಯಲ್ಲಿ ಗುರುರಾಜ ಪೂಜಾರಿ ಎಂಬವರ ಆಟೋದಲ್ಲಿ ಸಂಚರಿಸುವ ವೇಳೆ ಘಟನೆ ಸಂಭವಿಸಿದೆ. ಸ್ಥಳೀಯರ ಸಹಕಾರದೊಂದಿಗೆ ಆಂಬ್ಯುಲೆನ್ಸ್ ಮೂಲಕ ಕುಂದಾಪುರ ಖಾಸಗಿ ಆಸ್ಪತ್ರೆಗೆ ಕರೆದೊಯ್ಯುವ ದಾರಿ ಮಧ್ಯೆ ಅವರು ಮೃತಪಟ್ಟಿದ್ದಾರೆ .ರಿಕ್ಷಾ ಚಾಲಕ ಗುರುರಾಜ ಪೂಜಾರಿ ಅವರಿಗೂ ಗಾಯಗಳಾಗಿದ್ದು, ಈ ಬಗ್ಗೆ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!