Thursday, June 25, 2026
Homeಕರಾವಳಿಉಡುಪಿಉಡುಪಿ: ಕೆಎಸ್‌ಆರ್‌ಟಿಸಿ ಬಸ್  ಢಿಕ್ಕಿಯಾಗಿ ಪಾದಾಚಾರಿ ಸಾವು

ಉಡುಪಿ: ಕೆಎಸ್‌ಆರ್‌ಟಿಸಿ ಬಸ್  ಢಿಕ್ಕಿಯಾಗಿ ಪಾದಾಚಾರಿ ಸಾವು

- Advertisement -
- Advertisement -

ಉಡುಪಿ: ಕೆಎಸ್‌ಆರ್‌ಟಿಸಿ ಬಸ್  ಢಿಕ್ಕಿಯಾಗಿ ಪಾದಾಚಾರಿ ಸಾವನ್ನಪ್ಪಿರುವ ಘಟನೆ ಉಚ್ಚಿಲ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಮುಖ್ಯಪೇಟೆಯಲ್ಲಿ ನಡೆದಿದೆ.

 ಉಡುಪಿಯತ್ತ ಹೋಗುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್   ಉಚ್ಚಿಲ ನಿವಾಸಿ ಶಿವಪ್ಪ ಬೆಳ್ಚಡ (63) ಅವರಿಗೆ ಡಿಕ್ಕಿಯಾಗಿದೆ. ಪರಿಣಾಮ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗ ಮಧ್ಯೆ ಅವರು  ಮೃತಪಟ್ಟಿದ್ದಾರೆ.

ಶಿವಪ್ಪ ಅವರು ಹೆದ್ದಾರಿಯನ್ನು ದಾಟುತ್ತಿದ್ದಾಗ ಈ ಅವಘಡ ಸಂಭವಿಸಿದೆ. ರಸ್ತೆಗೆ ಅಪ್ಪಳಿಸಲ್ಪಟ್ಟ ಅವರ ತಲೆಗೆ ಗಂಭೀರ ಗಾಯಗಳಾಗಿದ್ದು, ಸಾರ್ವಜನಿಕರ ಸಹಕಾರದಿಂದ ತಕ್ಷಣವೇ ಸ್ಥಳೀಯ ಆ್ಯಂಬುಲೆನ್ಸ್‌ ಮೂಲಕ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದಾಗ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಪಡುಬಿದ್ರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!