ದೇಶಾದ್ಯಂತ ಕೊರೊನಾ ವೈರಸ್ ಅಟ್ಟಹಾಸ ತೋರುತ್ತಿದ್ದು, ಉಡುಪಿಯ ಪುತ್ತಿಗೆ ಮಠ ವತಿಯಿಂದ ಹತ್ತು ಲಕ್ಷ ರೂ. ದೇಣಿಗೆ ಕೊಡುತ್ತಿದ್ದೇವೆ ಎಂದು ಮಠಾಧೀಶ ಸುಗುಣೇಂದ್ರತೀರ್ಥ ಸ್ವಾಮಿಜಿ ಹೇಳಿದರು. ಕೊರೊನಾ ವೈರಸ್ ನ್ನು ಉದ್ದೇಶಪೂರ್ವಕವಾಗಿ ಪಸರಿಸಲಾಗುತ್ತಿದೆ ಎಂಬ ಬಗ್ಗೆ ನಮಗೆ ಅನುಮಾನ ಇದೆ. ಕೊರೊನಾ ವೈರಸ್ ನರಕಾಸುರ ನಂತೆ ಭಾಸವಾಗುತ್ತಿದೆ, ಕೊರೊನಾವನ್ನು ಉಲ್ಟಾ ಹೇಳಿದರೆ ನರಕ ಎಂದಾಗುತ್ತದೆ ಎಂದು ವಿಶ್ಲೇಶಿಸಿದರು.
ಅನಗತ್ಯ ಪ್ರಾಣಿ ಸಂಹಾರದಿಂದ ಕೊರೊನಾ ಬಂದಿದೆ. ಮನುಷ್ಯನ ದೇಹಕ್ಕೆ ಸಸ್ಯಾಹಾರವೇ ಸೂಕ್ತ. ಮನುಷ್ಯ ಬದುಕಲು ಮಾಂಸಾಹಾರದ ಅಗತ್ಯ ಇಲ್ಲ, ಜೀವಂತ ಪ್ರಾಣಿಗಳನ್ನು ಹಿಡಿದು ತಿನ್ನುವುದರಿಂದ ಕೊರೊನಾ ವೈರಸ್ ಬಂದಿದೆ ಎಂದು ತಿಳಿಸಿದರು.
ಜಾಗತಿಕ ವೇದಿಕೆಯಲ್ಲಿ ಕೊರೊನಾ ಬಗ್ಗೆ ಚರ್ಚೆಯಾಗಲಿ. ಈಗಾಗಲೇ ವಿಶ್ವದ ಧಾರ್ಮಿಕ ನಾಯಕರ ಜೊತೆ ಚರ್ಚೆ ನಡೆಸಿದ್ದೇನೆ. ಕೊರೊನಾದ ವಿರುದ್ಧ ದೂರಗಾಮಿ ಆಲೋಚನೆಯ ಅಗತ್ಯತೆ ಇದೆ ಎಂದರು. ಕೊರೊನಾದಿಂದ ಪುತ್ತಿಗೆ ಮಠದ ವಿದೇಶಿ ಬ್ರಾಂಚ್ ಗಳಿಗೆ ತೊಂದರೆಯಾಗಿದೆ. ಅಮೆರಿಕ, ಲಂಡನ್ ನ 11 ಶಾಖೆಗಳನ್ನು ಮುಚ್ಚಿದ್ದೇವೆ. ಮಠದ ಸಿಬ್ಬಂದಿಗಳು ಅರ್ಚಕರು ಗೊಂದಲದಲ್ಲಿದ್ದಾರೆ. ವಿದೇಶದ ಸರಕಾರಗಳು ನಮಗೆ ಸಾಕಷ್ಟು ಸಹಾಯ ಮಾಡಿವೆ ಎಂದು ಉಡುಪಿಯಲ್ಲಿ ಸುಗುಣೇಂದ್ರತೀರ್ಥ ಸ್ವಾಮೀಜಿ ಹೇಳಿದರು.