- Advertisement -
- Advertisement -
ಉಡುಪಿ: ನಗರದ ಪ್ರಮುಖ ಸಾಯಿರಾಜ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ (ಸಿಇಒ) ಸಚಿನ್ ಶೆಟ್ಟಿ (44) ಅವರು ತಮ್ಮ ಅಪಾರ್ಟ್‌ಮೆಂಟ್‌ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಕಲ್ಪನಾ ಟಾಕೀಸ್ ಬಳಿಯ ಸೊಸೈಟಿಯಲ್ಲಿ ಕಳೆದ ನಾಲ್ಕು ವರ್ಷಗಳಿಂದ ಸಿಇಒ ಆಗಿ ಕಾರ್ಯನಿರ್ವಹಿಸುತ್ತಿದ್ದ ಸಚಿನ್, ಅಂಬಲಪಾಡಿ ಸಮೀಪದ ‘ಬಿಆರ್ ಮೆಡೋಸ್’ ಅಪಾರ್ಟ್‌ಮೆಂಟ್‌ನ ಫ್ಲ್ಯಾಟ್‌ನಲ್ಲಿ ನೇಣಿಗೆ ಶರಣಾಗಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಉಡುಪಿ ನಗರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
- Advertisement -


