Saturday, June 6, 2026
Homeಕರಾವಳಿಉಡುಪಿಉಡುಪಿ;ಮಗಳ ಖಾಸಗಿ ವೀಡಿಯೋವನ್ನು ಸೋಷಿಯಲ್ ಮೀಡಿಯಾದಲ್ಲಿ ಹರಿಬಿಟ್ಟ ತಂದೆ; ಆತ್ಮಹತ್ಯೆಗೆ ಯತ್ನಿಸಿದ ಪುತ್ರಿ

ಉಡುಪಿ;ಮಗಳ ಖಾಸಗಿ ವೀಡಿಯೋವನ್ನು ಸೋಷಿಯಲ್ ಮೀಡಿಯಾದಲ್ಲಿ ಹರಿಬಿಟ್ಟ ತಂದೆ; ಆತ್ಮಹತ್ಯೆಗೆ ಯತ್ನಿಸಿದ ಪುತ್ರಿ

- Advertisement -
- Advertisement -

ಉಡುಪಿ; ಹೆತ್ತ ತಂದೆಯೇ ತನ್ನ ಮಗಳ ಖಾಸಗಿ ವೀಡಿಯೋವನ್ನು ಸೋಷಿಯಲ್ ಮೀಡಿಯಾದಲ್ಲಿ ಹರಿಬಿಟ್ಟು, ಇದರಿಂದ ನೊಂದ ಪುತ್ರಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಉಡುಪಿಯಲ್ಲಿ ನಡೆದಿದೆ. ಕಂಚಿನಡ್ಕದ ನಿವಾಸಿ ಆರೋಪಿ ಆಸೀಫ್‌ ವಿರುದ್ಧ ಇಂತಹದ್ದೊಂದು ಆರೋಪ ಕೇಳಿ ಬಂದಿದೆ.

ಆರೋಪಿ ಕಂಚಿನಡ್ಕದ ನಿವಾಸಿ ಆರೋಪಿ ಆಸೀಫ್‌ನ ಮಗಳು ಹಾಗೂ ತೀರ್ಥ ಹಳ್ಳಿಯ ಅವರ ಸಂಬಂಧಿ ತೌಸೀಫ್‌ ಪ್ರೀತಿಸುತ್ತಿದ್ದಳು. ಆದರೆ, ಇದು ಆಸೀಫ್ ನ ಇಷ್ಟವಿರಲಿಲ್ಲ. ಹೀಗಾಗಿ ಆಸೀಫ್, ತೌಸೀಫ್‌ನನ್ನು ಮನೆಗೆ ಕರೆಸಿ ಆತನ ಮೇಲೆ ಹಲ್ಲೆ ಮಾಡಿದ್ದಾನೆ. ಬಳಿಕ ಆತ ಹಾಗೂ ತನ್ನ ಮಗಳ ಫೋನ್‌ಗಳನ್ನು ಕಸಿದುಕೊಂಡು ಅದರಲ್ಲಿದ್ದ ವೀಡಿಯೋಗಳನ್ನು ತನ್ನ ಫೋನ್‌ಗೆ ವರ್ಗಾಯಿಸಿಕೊಂಡು ಅವುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾನೆ.

ಇದನ್ನು ವಿರೋಧಿಸಿದ ಪತ್ನಿ ಹಾಗೂ ಪುತ್ರಿಗೆ ಹಲ್ಲೆ ಮಾಡಿದ್ದಾನೆ. ಈ ಕುರಿತಾಗಿ ಆತನ  ಪತ್ನಿ ಉಡುಪಿ ಸೆನ್‌ ಠಾಣೆಗೆ ದೂರು ನೀಡಿದ್ದಾರೆ. ಬಳಿಕ ಪತ್ನಿಯು ಉಚ್ಚಿಲದ ತನ್ನ ತಾಯಿ ಮನೆಯಲ್ಲಿದ್ದಾಗ ಅಲ್ಲಿಗೂ ಹೋಗಿ ಗಲಾಟೆ ಮಾಡಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಈ  ನಡುವೆ ಘಟನೆಯಿಂದ ನೊಂದು ಆರೋಪಿಯ ಪುತ್ರಿ ಫಿನಾಯಿಲ್‌ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದು, ಆಕೆಯನ್ನು ಅಜ್ಜರಕಾಡು ಆಸ್ಪತ್ರೆಗೆ ದಾಖಲಿಸಲಾಗಿದೆ.

- Advertisement -

Latest News

error: Content is protected !!