Thursday, June 4, 2026
Homeಕರಾವಳಿಉಡುಪಿಉಡುಪಿ; ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಕದ್ದ ಆರೋಪಿಯ ಬಂಧನ

ಉಡುಪಿ; ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಕದ್ದ ಆರೋಪಿಯ ಬಂಧನ

- Advertisement -
- Advertisement -

ಉಡುಪಿ; ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಕದ್ದ ಆರೋಪಿಯನ್ನು ಕಾಪು ಪೊಲೀಸರು ಬಂಧಿಸಿದ್ದಾರೆ.ಕಾಪು ಉದ್ಯಾವರ ನಿವಾಸಿ ಅನಿತಾ ಡಿಸಿಲ್ವಾ ರವರ ಮನೆಗೆ ನುಗ್ಗಿ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಕದ್ದಿದ್ದಕಾಪು ಏಣಗುಡ್ಡೆ ಗ್ರಾಮದ ನಿವಾಸಿ ಜೋನ್ ಪ್ರಜ್ವಲ್ ಫೆರ್ನಾಂಡಿಸ್ (32) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

ಜುಲೈ 17 ರಂದು ಉದ್ಯಾವರ ನಿವಾಸಿ ಅನಿತಾ ಡಿಸಿಲ್ವಾ ರವರ ಮನೆಯಲ್ಲಿ ಮಧ್ಯಾಹ್ನ 1:00 ಗಂಟೆಯಿಂದ ಸಂಜೆ 05:00 ಗಂಟೆಯ ಮಧ್ಯದಲ್ಲಿ ಯಾರೋ ಕಳ್ಳರು ಮನೆಯ ಕಪಾಟಿನ ಲಾಕರ್ ನ್ನು ಮುರಿದು  ಅಂದಾಜು 5,50,000/- ರೂ ಮೌಲ್ಯದ ಚಿನ್ನ ಹಾಗೂ ಬೆಳ್ಳಿಯ ಆಭರಣಗಳನ್ನು ಕಳವುಗೈದಿದ್ದರು. ಈ ಬಗ್ಗೆ  ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಅದರಂತೆ ಈ ಬಗ್ಗೆ ತನಿಖೆ ನಡೆಸಿದ  ಕಾಪು ಪೊಲೀಸರು ಇದೀಗ ಆರೋಪಿಯನ್ನು ಬಂಧಿಸಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಸೊತ್ತುಗಳನ್ನು ಸ್ವಾಧೀನಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

- Advertisement -

Latest News

error: Content is protected !!