Friday, June 26, 2026
Homeಕರಾವಳಿಉಡುಪಿಉಡುಪಿ: ಮೂವರು ಕುಖ್ಯಾತ ರೌಡಿಶೀಟರ್‌ಗಳ ಗಡಿಪಾರು

ಉಡುಪಿ: ಮೂವರು ಕುಖ್ಯಾತ ರೌಡಿಶೀಟರ್‌ಗಳ ಗಡಿಪಾರು

- Advertisement -
- Advertisement -

ಉಡುಪಿ: ಸರಣಿ ಅಪರಾಧ ಕೃತ್ಯಗಳ ಮೂಲಕ ಸಾರ್ವಜನಿಕ ಶಾಂತಿ ಹಾಗೂ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುತ್ತಿದ್ದ ಮೂವರು ಕುಖ್ಯಾತ ರೌಡಿಶೀಟರ್‌ಗಳನ್ನು ಉಡುಪಿ ಜಿಲ್ಲೆಯಿಂದ ಗಡಿಪಾರು ಮಾಡಿ ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಹಾಗೂ ವಿಶೇಷ ಕಾರ್ಯಾಂಗ ದಂಡಾಧಿಕಾರಿ ಹರಿರಾಂ ಶಂಕರ್ ಆದೇಶ ಹೊರಡಿಸಿದ್ದಾರೆ. ಮೊಹಮ್ಮದ್ ದಾನೀಶ್ ಮದನಿ (23), ಕರಾಣಿ ಮುಸೀನ್‌ (44), ಇಲಿಯಾಸ್‌ (36) ಗಡಿಪಾರಿಗೆ ಒಳಗಾದವರು

ಕುಂದಾಪುರ ತಾಲೂಕಿನ ಗುಲ್ವಾಡಿ ಗ್ರಾಮದ ಮಾವಿನಕಟ್ಟೆಯ ನಿವಾಸಿಯಾದ ಮೊಹಮ್ಮದ್ ದಾನೀಶ್ ಮದನಿ (23) ವಿರುದ್ಧ ಒಟ್ಟು 8 ಗಂಭೀರ ಪ್ರಕರಣಗಳು ದಾಖಲಾಗಿದ್ದು, ಕುಂದಾಪುರ ಗ್ರಾಮಾಂತರ ಠಾಣೆಯಲ್ಲಿ ರೌಡಿಶೀಟ್ ತೆರೆಯಲಾಗಿತ್ತು. ಈತನನ್ನು ಪ್ರಸ್ತುತ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ನಗರ ಪೊಲೀಸ್ ಠಾಣಾ ವ್ಯಾಪ್ತಿಗೆ ಗಡಿಪಾರು ಮಾಡಲಾಗಿದೆ.

ಕುಂದಾಪುರ ತಾಲೂಕಿನ ಕಾವ್ರಾಡಿ ಗ್ರಾಮದ ಕಂಡ್ಲೂರಿನ ಜೆ.ಎಂ ರಸ್ತೆ ನಿವಾಸಿಯಾದ ಕರಾಣಿ ಮುಸೀನ್‌ (44) ವಿರುದ್ಧ 7 ಪ್ರಕರಣಗಳು ದಾಖಲಾಗಿವೆ. ಕುಂದಾಪುರ ಗ್ರಾಮಾಂತರ ಠಾಣೆಯ ರೌಡಿಶೀಟರ್ ಆಗಿರುವ ಈತನನ್ನು ಬೀದರ್ ಜಿಲ್ಲೆಯ ಗಾಂಧಿ ಗಂಜ್ ಪೊಲೀಸ್ ಠಾಣಾ ವ್ಯಾಪ್ತಿಗೆ ಗಡಿಪಾರುಗೊಳಿಸಲಾಗಿದೆ.

ಕಾಪು ತಾಲೂಕಿನ ಪಾದೂರು ಗ್ರಾಮದ ಚಂದ್ರನಗರ ಜನತಾ ಕಾಲೋನಿ ನಿವಾಸಿಯಾದ ಇಲಿಯಾಸ್‌ (36) ವಿರುದ್ಧ ಬರೋಬ್ಬರಿ 15 ಪ್ರಕರಣಗಳು ದಾಖಲಾಗಿದ್ದವು. ಶಿರ್ವ ಪೊಲೀಸ್ ಠಾಣೆಯ ರೌಡಿಶೀಟರ್ ಆಗಿರುವ ಇಲಿಯಾಸ್‌ನನ್ನು ಉತ್ತರ ಕನ್ನಡ ಜಿಲ್ಲೆಯ ಕಾರವಾರ ನಗರ ಪೊಲೀಸ್ ಠಾಣಾ ವ್ಯಾಪ್ತಿಗೆ ಗಡಿಪಾರು ಮಾಡಿ ಆದೇಶಿಸಲಾಗಿದೆ.

ಉಡುಪಿ ಜಿಲ್ಲಾ ಪೊಲೀಸ್ ಪ್ರಕಟಣೆಯ ಪ್ರಕಾರ, ಕಳೆದ ಒಂದು ವರ್ಷದ ಅವಧಿಯಲ್ಲಿ ಜಿಲ್ಲೆಯಲ್ಲಿ ಅಕ್ರಮ ದಂಧೆಕೋರರು ಹಾಗೂ ರೌಡಿಗಳ ವಿರುದ್ಧ ವ್ಯಾಪಕ ಕಾರ್ಯಾಚರಣೆ ನಡೆಸಲಾಗಿದೆ. ಇದರಲ್ಲಿ 3 ಪ್ರಮುಖ ಆರೋಪಿಗಳ ವಿರುದ್ಧ ಪಿ.ಐ.ಟಿ. ಎನ್.ಡಿ.ಪಿ.ಎಸ್.‌ (PIT NDPS) ಕಾಯ್ದೆಯಡಿ ಹಾಗೂ 4 ರೌಡಿಗಳ ವಿರುದ್ಧ ಕಠಿಣ ಗೂಂಡಾ ಕಾಯ್ದೆಯಡಿ (Goonda Act) ಪ್ರಕರಣ ದಾಖಲಿಸಿ ಜೈಲಿಗಟ್ಟಲಾಗಿದೆ. ಇದರ ಜೊತೆಗೆ ಕರಾವಳಿಯ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಒಟ್ಟು 14 ಜನರನ್ನು ಜಿಲ್ಲೆಯಿಂದ ಗಡಿಪಾರು ಮಾಡಲಾಗಿದೆ ಎಂದು ಜಿಲ್ಲಾ ಪೊಲೀಸ್ ಇಲಾಖೆ ತಿಳಿಸಿದೆ.

- Advertisement -

Latest News

error: Content is protected !!