ಉಡುಪಿ: ಇಬ್ಬರು ರೌಡಿ ಶೀಟರ್ ಗಳನ್ನು ಗಡಿಪಾರು ಮಾಡಿ ಆದೇಶ ಮಾಡಲಾಗಿದೆ. ಸುಹಾನ್ ಪೂಜಾರಿ ಹಾಗೂ ಮಹಮ್ಮದ್ ನೌಫಿಲ್ ಗಡಿಪಾರಿಗೆ ಒಳಗಾದವರು.
ಶಿರ್ವ ಪೊಲೀಸ್ ಠಾಣಾ ವ್ಯಾಪ್ತಿಯ ಮಹಮ್ಮದ್ ನೌಫಿಲ್ ಹಾಗೂ ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಸುಹಾನ್ ಪೂಜಾರಿ ಎಂಬುವರ ವಿರುದ್ಧ ವಿಶೇಷ ಕಾರ್ಯಾಂಗ ದಂಡಾಧಿಕಾರಿಯವರು ಹಾಗೂ ಪೊಲೀಸ್ ಅಧೀಕ್ಷಕರು ಉಡುಪಿ ಜಿಲ್ಲೆ ಉಡುಪಿ ರವರು ದಿನಾಂಕ 26.03.2026 ರಂದು ಗಡಿಪಾರು ಆದೇಶ ಹೊರಡಿಸಿದ್ದಾರೆ.
ಕಾಪು ತಾಲೂಕಿನ ಕಳತ್ತೂರು ಗ್ರಾಮದವನಾದ ಮಹಮ್ಮದ್ ನೌಫಿಲ್ ವಿರುದ್ಧ 5 ಪ್ರಕರಣ ದಾಖಲಾಗಿದ್ದು ಶಿರ್ವ ಠಾಣೆಯಲ್ಲಿ ರೌಡಿ ಶೀಟರ್ ತೆರೆಯಲಾಗಿರುತ್ತದೆ. ಅಂತೆಯೇ ಮಲ್ಪೆ ಠಾಣಾ ವ್ಯಾಪ್ತಿಯ ಸುಹಾನ್ ಪೂಜಾರಿ ಈತನ ವಿರುದ್ಧ 4 ಪ್ರಕರಣ ದಾಖಲಾಗಿರುತ್ತದೆ.
ಮಹಮ್ಮದ್ ನೌಫಿಲ್ ಈತನನ್ನು ಹಾವೇರಿ ಜಿಲ್ಲೆಯ ಶಿಗ್ಗಾಂವ ಪೊಲೀಸ್ ಠಾಣಾ ವ್ಯಾಪ್ತಿಗೆ ಮತ್ತು ಸುಹಾನ್ ಪೂಜಾರಿ ಈತನನ್ನು ಯಾದಗಿರಿ ಜಿಲ್ಲೆಯ ಯಾದಗಿರಿ ನಗರ ಪೊಲೀಸ್ ಠಾಣಾ ವ್ಯಾಪ್ತಿಗೆ ಗಡಿಪಾರು ಮಾಡಲಾಗಿದೆ.


