Saturday, April 27, 2024
Homeಕರಾವಳಿಉಡುಪಿಉಡುಪಿಯ ವಿದ್ಯಾಸಾಗರತೀರ್ಥ ಸ್ವಾಮೀಜಿ ಧರ್ಮಸ್ಥಳ ಭೇಟಿ

ಉಡುಪಿಯ ವಿದ್ಯಾಸಾಗರತೀರ್ಥ ಸ್ವಾಮೀಜಿ ಧರ್ಮಸ್ಥಳ ಭೇಟಿ

spot_img
- Advertisement -
- Advertisement -

ಉಜಿರೆ: ಉಡುಪಿಯ ಕೃಷ್ಣಾಪುರ ಮಠದ ಪೂಜ್ಯ ವಿದ್ಯಾಸಾಗರತೀರ್ಥ ಸ್ವಾಮೀಜಿ ಇಂದು ಧರ್ಮಸ್ಥಳಕ್ಕೆ ಆಗಮಿಸಿದ್ದರು. ಈ ಸಂದರ್ಭ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಗೌರವಿಸಿದರು .

2022 ರ ಜನವರಿ 18 ರಂದು ಉಡುಪಿಯ ಪರ್ಯಾಯ ಮಹೋತ್ಸವದಲ್ಲಿ ಸರ್ವಜ್ಞ ಪೀಠಾರೋಹಣ ಮಾಡಲಿರುವ ಪೂಜ್ಯ ವಿದ್ಯಾಸಾಗರತೀರ್ಥ ಸ್ವಾಮೀಜಿ ಗುರುವಾರ ಧರ್ಮಸ್ಥಳಕ್ಕೆ ಆಗಮಿಸಿದಾಗ ಅವರಿಗೆ ಭವ್ಯ ಸ್ವಾಗತ ಕೋರಲಾಯಿತು.

ಸ್ವಾಮೀಜಿಯವರು ಧರ್ಮಾಧಿಕಾರಿ ಡಿ . ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಹಾಗೂ ಹೆಗ್ಗಡೆಯವರು ಕ್ಷೇತ್ರದ ಪರವಾಗಿ ಸ್ವಾಮೀಜಿಯವರನ್ನು ಗೌರವಿಸಿದರು.

ಈ ಸಂದರ್ಭ ಸ್ವಾಮೀಜಿಯವರ ಪಾದಪೂಜೆ ನಡೆಸಲಾಯಿತು. ದೇವಸ್ಥಾನಕ್ಕೆ ತೆರಳಿ ಸ್ವಾಮೀಜಿಯವರು ದೇವರ ದರ್ಶನ ಮಾಡಿ ವಿಶೇಷ ಪೂಜೆ ಸಲ್ಲಿಸಿದರು .

ಪೂಜ್ಯ ವಿದ್ಯಾಸಾಗರತೀರ್ಥ ಸ್ವಾಮೀಜಿಯವರನ್ನು ಡಿ . ಹರ್ಷಂದ್ರ ಕುಮಾರ್‌ ಸ್ವಾಗತಿಸಿದರು. ಹೇಮಾವತಿ ವಿ . ಹೆಗ್ಗಡೆಯವರು ಮತ್ತು ಸುಪ್ರಿಯಾ ಹರ್ಷೇಂದ್ರ ಕುಮಾರ್‌ ಉಪಸ್ಥಿತರಿದ್ದರು. ಹೆಗ್ಗಡೆಯವರ ಆಪ್ತ ಕಾರ್ಯದರ್ಶಿ ಎ.ವಿ. ಶೆಟ್ಟಿ ಮತ್ತು ದೇವಳ ಪಾರುಪತ್ಯಗಾರ್ ಲಕ್ಷ್ಮೀನಾರಾಯಣ ರಾವ್ ಕಾರ್ಯಕ್ರಮ ಸಂಯೋಜಿಸಿದರು.

- Advertisement -
spot_img

Latest News

error: Content is protected !!