ಉಡುಪಿ: ತಾಯಿ ಮನೆಗೆ ಹೋಗೋದಾಗಿ ಹೇಳಿ ಹೋದ ಮಹಿಳೆ ನಾಪತ್ತೆಯಾಗಿರುವ ಘಟನೆ ಕಾಪು ತಾಲೂಕು ನಡ್ಸಾಲು ಗ್ರಾಮದಲ್ಲಿ ನಡೆದಿದೆ. ನಡ್ಸಾಲು ಗ್ರಾಮದ ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದ ಮಲ್ಲಿಕಾ (34) ನಾಪತ್ತೆಯಾದವರು.
ಮಲ್ಲಿಕಾ ಜನವರಿ 05 ರಂದು ತನ್ನ ತಾಯಿ ಮನೆಯಾದ ರಾಮನಗರಕ್ಕೆ ಹೋಗುವುದಾಗಿ ಹೇಳಿ ಹೋದವರು, ತಾಯಿಯ ಮನೆಗೂ ಹೋಗದೇ, ವಾಪಾಸು ಮನೆಗೂ ಬಾರದೇ ನಾಪತ್ತೆಯಾಗಿದ್ದಾರೆ. 5 ಅಡಿ ಎತ್ತರ, ಬಿಳಿ ಮೈಬಣ್ಣ, ಸಪೂರ ಶರೀರ ಹೊಂದಿದ್ದು, ಕನ್ನಡ, ತುಳು, ಮರಾಠ ಹಾಗೂ ಮಲಯಾಳಂ ಭಾಷೆ ಮಾತನಾಡುತ್ತಾರೆ.
ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಪಡುಬಿದ್ರಿ ಪೊಲೀಸ್ ಠಾಣೆಯ ಪೊಲೀಸ್ ಉಪ ನಿರೀಕ್ಷಕರು ಮೊ.ನಂ: 0820-2555452, ಮೊ.ನಂ: 9480805450, ಕಾಪು ಪೊಲೀಸ್ ವೃತ್ತ ನಿರೀಕ್ಷಕರು ದೂ.ಸಂಖ್ಯೆ: 0820-2552133, ಮೊ.ನಂ: 9480805431 ಹಾಗೂ ಪೊಲೀಸ್ ಕಂಟ್ರೋಲ್ ರೂಂ ದೂ.ಸಂಖ್ಯೆ;0820-2525444 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪಡುಬಿದ್ರಿ ಪೊಲೀಸ್ ಠಾಣೆಯ ಉಪನಿರೀಕ್ಷಕರ ಕಚೇರಿ ಪ್ರಕಟಣೆ ತಿಳಿಸಿದೆ.


