Wednesday, June 3, 2026
HomeUncategorizedಉಡುಪಿ; ಟ್ರೆಕ್ಕಿಂಗ್ ಗೆ ತೆರಳಿದ್ದ ಮಹಿಳೆ ನದಿಯಲ್ಲಿ ಮುಳುಗಿ ಸಾವು

ಉಡುಪಿ; ಟ್ರೆಕ್ಕಿಂಗ್ ಗೆ ತೆರಳಿದ್ದ ಮಹಿಳೆ ನದಿಯಲ್ಲಿ ಮುಳುಗಿ ಸಾವು

- Advertisement -
- Advertisement -

ಉಡುಪಿ; ಟ್ರೆಕ್ಕಿಂಗ್ ಗೆ ತೆರಳಿದ್ದ ಮಹಿಳೆ ನದಿಯಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಹೊಸಂಗಡಿಯ ಭಾಗಿಮನೆ ಬಳಿ ಮಾರ್ಚ್ 1ರ ಭಾನುವಾರ ನಡೆದಿದೆ.


ಕುಂದಾಪುರದ ಮೆಡಿಕಲ್ ಶಾಪ್‌ ವೊಂದರ ಮಾಲಕಿ ಶುಭಶ್ರೀ ಕಾರಂತ್ ( 53) ಮೃತರು. ಕುಂದಾಪುರದಿಂದ 8-10 ಜನರ ತಂಡ ಹೊಸಂಗಡಿಯ ಮೆಟ್ಕಲ್ ಗುಡ್ಡ ಕಡೆಗೆ ಟ್ರೆಕ್ಕಿಂಗ್ ಹೋಗಿದ್ದರು ಎನ್ನಲಾಗಿದೆ. ಈ ವೇಳೆ ನದಿಯಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಮೃತದೇಹವನ್ನು‌ ಕುಂದಾಪುರದ ಸರಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಅಮಾಸೆಬೈಲು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಮಾಹಿತಿ ‌ಕಲೆಹಾಕಿದ್ದಾರೆ.

- Advertisement -

Latest News

error: Content is protected !!