- Advertisement -
- Advertisement -
ಕುಂದಾಪುರ: ಐತಿಹಾಸಿಕ ಕೋಟೇಶ್ವರ ಶ್ರೀ ಕೋಟಿಕೋಟೀಶ್ವರ ದೇವಸ್ಥಾನದ ಕೋಟಿತೀರ್ಥ ಪುಷ್ಕರಣಿಗೆ ಹಾರಿ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಹೊದ್ರಾಳಿ ಕೊಳನಕಟ್ಟೆ ನಿವಾಸಿ, ಕುಂದಾಪುರದ ಹೆಂಚಿನ ಫ್ಯಾಕ್ಟರಿ ಕಾರ್ಮಿಕ ಪದ್ಮನಾಭ ಆಚಾರ್ಯ (37) ಮೃತಪಟ್ಟವರು. ಕಳೆದ 4 ತಿಂಗಳಿನಿಂದ ಕೆಲಸಕ್ಕೆ ಹೋಗದೆ ಮನೆಯಲ್ಲಿದ್ದ ಇವರು ಮಂಗಳವಾರ ಬೆಳಿಗ್ಗೆಯಿಂದ ನಾಪತ್ತೆಯಾಗಿದ್ದರು. ರಾತ್ರಿ ದೇವಸ್ಥಾನದ ಕೆರೆಯ ಮೆಟ್ಟಿಲುಗಳ ಬಳಿ ಅವರ ದ್ವಿಚಕ್ರ ವಾಹನ, ಚಪ್ಪಲಿ ಹಾಗೂ ಟೋಪಿ ಪತ್ತೆಯಾಗಿತ್ತು.
ಬುಧವಾರ ಬೆಳಿಗ್ಗೆ ನಡೆಸಿದ ಶೋಧ ಕಾರ್ಯಾಚರಣೆಯಲ್ಲಿ, ಪ್ರಸಿದ್ಧ ಮುಳುಗುತಜ್ಞ ಈಶ್ವರ ಮಲ್ಪೆ ಹಾಗೂ ತಂಡ ಸ್ಥಳೀಯರ ನೆರವಿನಿಂದ ಮೃತದೇಹವನ್ನು ಹೊರತೆಗೆದಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -


