Friday, August 7, 2026
Homeಕರಾವಳಿಮಂಗಳೂರುಉಡುಪಿ: ಮಾಡೆಲಿಂಗ್ ಮಾಡುತ್ತಿದ್ದ ಯುವತಿಯೊಬ್ಬಳು ನೇಣಿಗೆ ಶರಣು

ಉಡುಪಿ: ಮಾಡೆಲಿಂಗ್ ಮಾಡುತ್ತಿದ್ದ ಯುವತಿಯೊಬ್ಬಳು ನೇಣಿಗೆ ಶರಣು

- Advertisement -
- Advertisement -

ಉಡುಪಿ: ಮಾಡೆಲಿಂಗ್ ಮಾಡುತ್ತಿದ್ದ ಯುವತಿಯೊಬ್ಬಳು ನೇಣಿಗೆ ಶರಣಾಗಿರುವ ಘಟನೆ ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಕಲ್ಮಾಡಿಯಲ್ಲಿ ಗುರುವಾರ ನಡೆದಿದೆ. ಕಲ್ಮಾಡಿ ನಿವಾಸಿ ರತ್ನಾ ಎಂಬುವರ ಪುತ್ರಿ ಕೃತಿ ಬಂಗೇರ (27) ಮೃತ ಯುವತಿ.

ಮಾಡೆಲಿಂಗ್ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದ ಕೃತಿ ಬಂಗೇರ ಅವರು ಉಡುಪಿ ನಗರದ ಕಡಿಯಾಳಿ ಸಮೀಪದ ಖಾಸಗಿ ಹೋಟೆಲ್‌ ಒಂದರಲ್ಲಿ ಕೆಲಸ ಮಾಡುತ್ತಿದ್ದರು. ಆದರೆ, ಕಳೆದ ಐದು ತಿಂಗಳಿಂದ ಅವರು ಕೆಲಸಕ್ಕೆ ತೆರಳದೆ ಮನೆಯಲ್ಲೇ ಇದ್ದರು ಎನ್ನಲಾಗಿದೆ. ಈ ನಡುವೆ ತೀವ್ರ ಮಾನಸಿಕ ಒತ್ತಡ ಹಾಗೂ ಜಿಗುಪ್ಸೆಗೆ ಒಳಗಾಗಿದ್ದ ಕೃತಿ, ಗುರುವಾರ ತಮ್ಮ ಮನೆಯ ಬೆಡ್‌ರೂಮ್‌ನಲ್ಲಿ ಫ್ಯಾನ್‌ಗೆ ನೇಣು  ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

- Advertisement -

Latest News

error: Content is protected !!