- Advertisement -
![]()
- Advertisement -
ಉಡುಪಿ; ಸಂಜೀವಿನಿ ಮಹಿಳಾ ಸ್ವ-ಸಹಾಯ ಗುಂಪಿನ ಸದಸ್ಯರಿಂದ ನೂತನವಾಗಿ ಪ್ರಾರಂಭವಾಗಿರುವ ʻಅಕ್ಕ ಕೆಫೆʼಯನ್ನು ಉಡುಪಿ ಜಿಲ್ಲಾಡಳಿತ ಮತ್ತು ಉಡುಪಿ ಜಿಲ್ಲಾ ಪಂಚಾಯತ್ ಸಹಯೋಗದೊಂದಿಗೆ ಉಡುಪಿ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಉದ್ಘಾಟಿಸಲಾಯಿತು.
ಈ ಕೆಫೆಯಲ್ಲಿ ಸಂಜೀವಿನಿ ಮಹಿಳಾ ಸ್ವ-ಸಹಾಯ ಗುಂಪಿನ ಸದಸ್ಯರು ತಯಾರಿಸಿದ ರುಚಿಕರವಾದ ಊಟ ಮತ್ತು ತಿಂಡಿಗಳನ್ನು ಕೈಗೆಟುಕುವ ಬೆಲೆಯಲ್ಲಿ ನೀಡಲಾಗುತ್ತಿದ್ದು, ಸದ್ಯ ಈ ಕೆಫೆಯನ್ನು ಕಲ್ಯಾಣಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ ಬ್ರಹ್ಮಶ್ರೀ ಸಂಜೀವಿನಿ ಒಕ್ಕೂಟದ ಮಹಿಳೆಯರು ನಿರ್ವಹಿಸುತ್ತಿದ್ದಾರೆ. ಈ ಕೆಫೆಯನ್ನು ಕರ್ನಾಟಕ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯು ಪರಿಚಯಿಸಿದೆ.
ಇದು ದುಡಿಯುವ ಮಹಿಳೆಯರಿಗೆ ಉದ್ಯೋಗಾವಕಾಶಗಳನ್ನು ಸೃಷ್ಟಿಸುವ ಮತ್ತು ಸಾರ್ವಜನಿಕರಿಗೆ ಶುದ್ಧ, ರುಚಿಕರ ಹಾಗೂ ಕೈಗೆಟುಕುವ ದರದಲ್ಲಿ ಆಹಾರ ಒದಗಿಸುವ ಗುರಿಯನ್ನು ಹೊಂದಿದೆ.
- Advertisement -


