Friday, June 26, 2026
Homeಕರಾವಳಿಅನಾರೋಗ್ಯದಿಂದ ಉಜಿರೆಯ ಖಾಸಗಿ ಕಾಲೇಜಿನ ವಿದ್ಯಾರ್ಥಿನಿ ಸಾವು

ಅನಾರೋಗ್ಯದಿಂದ ಉಜಿರೆಯ ಖಾಸಗಿ ಕಾಲೇಜಿನ ವಿದ್ಯಾರ್ಥಿನಿ ಸಾವು

- Advertisement -
- Advertisement -

ಬೆಳ್ತಂಗಡಿ: ಅನಾರೋಗ್ಯದಿಂದ ಉಜಿರೆಯ ಖಾಸಗಿ ಕಾಲೇಜಿನ ವಿದ್ಯಾರ್ಥಿನಿಯೊಬ್ಬಳು ನಿಧನಳಾಗಿದ್ದಾಳೆ.

ಬೆಳ್ತಂಗಡಿ ತಾಲೂಕಿನ ಕೊಕ್ಕಡ ಗ್ರಾಮದ ಮೀಯಾಳ ನಿವಾಸಿ ನಾಗೇಶ್ ನಳಿಯಾರ್ ಹಾಗೂ ಹೇಮಾವತಿ ದಂಪತಿಯ ಪುತ್ರಿ, ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಶ್ರಾವ್ಯ ಮೃತ ದುರ್ದವಿ.

ಶ್ರಾವ್ಯ ಕೆಲ ದಿನದ ಹಿಂದೆ ಅನಾರೋಗ್ಯಕ್ಕೆ ಒಳಗಾಗಿದ್ದಳು. ಆಕೆಗೆ ಪುತ್ತೂರಿನ ಖಾಸಗಿ ಆಸ್ಪತ್ರೆಯ ವೈದ್ಯರ ಬಳಿ ಚಿಕಿತ್ಸೆ ಕೊಡಿಸಲಾಗಿತ್ತು. 10 ದಿನದ ಹಿಂದೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು ಪುತ್ತೂರಿನ ವೈದ್ಯರ ಸಲಹೆಯಂತೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಜೂ.12ರಂದು ಮೃತಪಟ್ಟಿದ್ದಾರೆ.

ಮೃತರು ತಂದೆ ನಾಗೇಶ್ ನಳಿಯಾರ್, ತಾಯಿ ಹೇಮಾವತಿ ಹಾಗೂ ಸಹೋದರಿಯನ್ನು ಅಗಲಿದ್ದಾರೆ.

- Advertisement -

Latest News

error: Content is protected !!