Saturday, June 6, 2026
Homeಕರಾವಳಿಉಜಿರೆ ಬಾಲಕನ ಅಪಹರಣ ಪ್ರಕರಣ: ಮತ್ತೋರ್ವ ಆರೋಪಿ ಸೆರೆ

ಉಜಿರೆ ಬಾಲಕನ ಅಪಹರಣ ಪ್ರಕರಣ: ಮತ್ತೋರ್ವ ಆರೋಪಿ ಸೆರೆ

- Advertisement -
- Advertisement -

ಬೆಳ್ತಂಗಡಿ: ಉಜಿರೆಯಲ್ಲಿ ಇತ್ತೀಚೆಗೆ ಆಟವಾಡುತ್ತಿದ್ದ 8 ವರ್ಷದ ಮಗುವೊಂದನ್ನು ಸಿನಿಮೀಯ ರೀತಿಯಲ್ಲಿ ಅಪಹರಣ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಆರೋಪಿ ಚಾಮರಾಜನಗರ ನಿವಾಸಿ ನವೀನ (೨೮) ಬಂಧಿಸಲಾಗಿದೆ.

ಉಜಿರೆ ಉದ್ಯಮಿ ರಥಬೀದಿ ನಿವಾಸಿ ಎ.ಕೆ.ಶಿವನ್ ಎಂಬುವರ ಮೊಮ್ಮಗ ಅನುಭವ್ (8) ವರ್ಷದ ಮಗುವನ್ನು ಮನೆ ಮುಂಭಾಗದಿಂದ ಆಟವಾಡುತ್ತಿದ್ದ ‌ವೇಳೆ ಅಪರಿಚಿತರು ಕಾರಿನಲ್ಲಿ ಅಪಹರಣ ಮಾಡಿದ್ದು, ಮನೆ ಮಂದಿ ಕಾರಿನ ಬಳಿ ಬಂದಂತೆ ಪರಾರಿಯಾಗಿದ್ದಾರೆ. ಬಳಿಕ ಮಗುವಿನ ತಾಯಿಗೆ ಕರೆ ಮಾಡಿ 100 ಬಿಟ್ ಕಾಯಿನ್ ಅಂದರೆ 17 ಕೋಟಿ ರೂ. ನೀಡುವಂತೆ ಬೇಡಿಕೆಯಿಟ್ಟಿದ್ದರು.

- Advertisement -

Latest News

error: Content is protected !!