- Advertisement -
![]()
- Advertisement -
ಬೆಳ್ತಂಗಡಿ: ಜಿಲ್ಲೆಯಲ್ಲಿ ಮುಂಗಾರು ಮಳೆಯ ಪ್ರವಾಹಕ್ಕೆ ಹಲವು ರಸ್ತೆಗಳ ಸಂಚಾರ ಬಂದ್ ಆಗಿದೆ. ಮಂಗಳೂರು- ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿ 234 ರ ಮಧ್ಯ ಚಾರ್ಮಾಡಿ ಘಾಟ್ ನ ಅಲೇಖಾನ್ ಸಮೀಪ ಘಾಟ್ ರಸ್ತೆ ಬಿರುಕು ಕಂಡು ಬಂದ ಕಾರಣ ಚಾರ್ಮಾಡಿ ಘಾಟ್ ನಲ್ಲಿ ವಾಹನ ಸಂಚಾರ ಮತ್ತೆ ಸ್ಥಗಿತವಾಗಿದೆ.

ರಸ್ತೆಯ 15 ಫೀಟ್ ಅಂತರದಲ್ಲಿ ಎರಡು ಕಡೆಯಲ್ಲಿ ಬಿರುಕು ಬಿಟ್ಟಿದೆ. ರಸ್ತೆಯಲ್ಲಿ ಭಾರೀ ಬಿರುಕು ಕಂಡು ಬಂದ ಹಿನ್ನಲೆ ಮುನ್ನಚ್ಚೆರಿಕಾ ಕ್ರಮವಾಗಿ ಘಾಟ್ ನಲ್ಲಿ ರಸ್ತೆ ಸಂಚಾರ ಸ್ಥಗಿತ ಮಾಡಲಾಗಿದೆ. ಚಾರ್ಮಾಡಿ ಚೆಕ್ ಪೋಸ್ಟ್, ಕೊಟ್ಟಿಗೆಹಾರ ಚೆಕ್ ಪೋಸ್ಟ್ ಬಂದ್ ಮಾಡಲಾಗಿದೆ. ವಾಹನಗಳು ಸಾಲುಗಟ್ಟಿ ನಿಂತಿವೆ.


- Advertisement -


