Saturday, October 17, 2026
Homeಕರಾವಳಿಬೆಳ್ತಂಗಡಿ : ಉಜಿರೆ ಲಾಡ್ಜ್ ಮೇಲೆ ಪೊಲೀಸ್ ದಾಳಿ ಪ್ರಕರಣ:ಇಬ್ಬರು ಆರೋಪಿಗಳಿಗೆ ನ್ಯಾಯಾಂಗ ಬಂಧನ

ಬೆಳ್ತಂಗಡಿ : ಉಜಿರೆ ಲಾಡ್ಜ್ ಮೇಲೆ ಪೊಲೀಸ್ ದಾಳಿ ಪ್ರಕರಣ:ಇಬ್ಬರು ಆರೋಪಿಗಳಿಗೆ ನ್ಯಾಯಾಂಗ ಬಂಧನ

- Advertisement -
- Advertisement -

ಬೆಳ್ತಂಗಡಿ : ಲಾಡ್ಜ್ ನಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳ್ತಂಗಡಿ ಪೊಲೀಸರು ಉಜಿರೆಯ ಎಂ.ಎಸ್.ಎಸ್ ಲಾಡ್ಜ್ ಮೇಲೆ ದಾಳಿ ಮಾಡಿದ ಪ್ರಕರಣದಲ್ಲಿ ಇಬ್ಬರು ಆರೋಪಿಗಳಿಗೆ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು ನ್ಯಾಯಾಲಯ ಇಬ್ಬರಿಗೂ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಬೆಳ್ತಂಗಡಿ ತಾಲೂಕಿನ ಉಜಿರೆಯ ಚಾರ್ಮಾಡಿ ರಸ್ತೆಯಲ್ಲಿರುವ ಎಂ.ಎಸ್.ಎಸ್ ಲಾಡ್ಜ್ ನಲ್ಲಿ ವೇಶ್ಯಾವಾಟಿಕೆ ಮಾಡುತ್ತಿದ್ದ ಬಗ್ಗೆ ಫೆ.7 ರಂದು ಸಂಜೆ ಬೆಳ್ತಂಗಡಿ ಇನ್ಸ್ಪೆಕ್ಟರ್ ಸತ್ಯನಾರಾಯಣ.ಕೆ ಮತ್ತು ಸಬ್ ಇನ್ಸ್ಪೆಕ್ಟರ್ ಅರ್ಜುನ್ ನೇತೃತ್ವದ ತಂಡ ದಾಳಿ ಮಾಡಿದ್ದರು. ಈ ವೇಳೆ ಲಾಡ್ಜ್ ನ ರೂಂ ನಲ್ಲಿ ಐದು ಮಹಿಳೆಯರನ್ನು ರಕ್ಷಣೆ ಮಾಡಿದ್ದು ಇಬ್ಬರು ಆರೋಪಿಗಳಾದ ಸಂತೋಷ್ ಮತ್ತು ಇರ್ಷಾದ್ ಎಂಬವರನ್ನು ಬಂಧಿಸಿದ್ದರು. ಇಬ್ಬರು ಆರೋಪಿಗಳನ್ನು ಫೆ.8 ರಂದು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಲಯ ಇಬ್ಬರಿಗೂ ನ್ಯಾಯಾಂಗ ಬಂಧನ ವಿಧಿಸಿದೆ.

ಐದು ಮಂದಿ ಮಹಿಳೆಯರನ್ನು ಮಂಗಳೂರಿನ ಮಹಿಳಾ ಸಾಂತ್ವನ ಕೇಂದ್ರಕ್ಕೆ ಒಪ್ಪಿಸಲಾಗಿದೆ. ಇನ್ನೂ ಲಾಡ್ಜ್ ನ ಕಿಂಗ್ ಪಿನ್ ಸಹೋದರರಾದ ಸುರೇಶ್ ಪೂಜಾರಿ ಮತ್ತು ರಮೇಶ್ ಪೂಜಾರಿ ಮೊಬೈಲ್ ಸ್ವಿಚ್ ಆಫ್ ಮಾಡಿ ಪರಾರಿಯಾಗಿದ್ದು ಅವರ ಬಂಧನಕ್ಕಾಗಿ ಬೆಳ್ತಂಗಡಿ ಪೊಲೀಸರು ಶೋಧ ನಡೆಸುತ್ತಿದ್ದಾರೆ.

- Advertisement -

Latest News

error: Content is protected !!