Thursday, June 25, 2026
Homeಕರಾವಳಿಮಂಗಳೂರುಉಜಿರೆ ಎಸ್.ಡಿ. ಎಂ ಆಸ್ಪತ್ರೆಯ ವತಿಯಿಂದ  ವಿವಿಧ ಸಂಘಟನೆಗಳ ಸಹಯೋಗದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

ಉಜಿರೆ ಎಸ್.ಡಿ. ಎಂ ಆಸ್ಪತ್ರೆಯ ವತಿಯಿಂದ  ವಿವಿಧ ಸಂಘಟನೆಗಳ ಸಹಯೋಗದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

- Advertisement -
- Advertisement -

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಬೆಳ್ತಂಗಡಿ ತಾಲೂಕು ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ ಪ್ರಗತಿ ಬಂಧು ಸ್ವಸಹಾಯ  ಸಂಘಗಳ ಒಕ್ಕೂಟ ಮುಂಡಾಜೆ ವಲಯ, ಶೌರ್ಯ ವಿಪತ್ತು ನಿರ್ವಹಣಾ ಘಟಕ ಕುಕ್ಕಾವು, ಜನಜಾಗೃತಿ  ಮಿತಿ ಕುಕ್ಕಾವು ಇದರ  ಸಹಕಾರದೊಂದಿಗೆ ವಿವಿಧ ಸಂಘಟನೆಗಳ ಸಹಯೋಗದಲ್ಲಿ ಉಜಿರೆ ಎಸ್.ಡಿ. ಎಂ ಆಸ್ಪತ್ರೆಯ ತಜ್ಞ ವೈದ್ಯರುಗಳಿಂದ ಉಚಿತ ಆರೋಗ್ಯ  ತಪಾಸಣಾ ಶಿಬಿರವನ್ನು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕುಕ್ಕಾವು ಇಲ್ಲಿ ನಡೆಸಲಾಯಿತು.

ಕೂಡಬೆಟ್ಟು ಸದಾಶಿವೇಶ್ವರ ದೇವಸ್ಥಾನದ ಮೊಕ್ತೇಸರರಾದ ವಾಸುದೇವ ಕಕ್ಕೆನೇಜಿ ಶಿಬಿರವನ್ನು ಉದ್ಘಾಟಿಸಿದರು. ಉಜಿರೆ ಎಸ್.ಡಿ.ಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ಮೇಲ್ವಿಚಾರಕರಾದ ರವೀಂದ್ರ ಗುಡಿಗಾರ್ ಎಸ್.ಡಿ.ಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ದೊರೆಯುವ ವೈದ್ಯಕೀಯ ಸೇವೆಗಳ ಮಾಹಿತಿ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಇಲ್ಲಿನ ಗ್ರಾಮ ಪಂಚಾಯತ್ ಅಧ್ಯಕ್ಷ ವಿನಯಚಂದ್ರ ಗೌಡ ವಹಿಸಿದ್ದರು.ವೇದಿಕೆಯಲ್ಲಿ ತಾಲೂಕಿನ ಯೋಜನಾಧಿಕಾರಿ ಯಶೋಧರ,ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರಾದ ಹರೀಶ್ ಮಾಂಜ, ಜನಜಾಗೃತಿ ಗ್ರಾಮ ಸಮಿತಿ ಅಧ್ಯಕ್ಷ ನೋಣಯ್ಯ ಗೌಡ, ಬಂಗಾಡಿ ಸಿಎ ಬ್ಯಾಂಕ್ ಉಪಾಧ್ಯಕ್ಷ ಆನಂದ ಗೌಡ, ಒಕ್ಕೂಟದ ಅಧ್ಯಕ್ಷ ಜಗದೀಶ್ ಕುಂಬಾರ ಮತ್ತು ಸುರೇಶ್, ಶೌರ್ಯ ವಿಪತ್ತು ಘಟಕದ ಪ್ರತಿನಿಧಿ ಲೋಕೇಶ್ ಕುಂಬಾರು ಉಪಸ್ಥಿತರಿದ್ದರು.

ಉಜಿರೆ ಎಸ್.ಡಿ. ಎಂ ಆಸ್ಪತ್ರೆಯ ಮಕ್ಕಳ ತಜ್ಞರಾದ ಡಾ| ಪ್ರತೀತ್, ಮೂಳೆ ಶಸ್ತçಚಿಕಿತ್ಸಾ ತಜ್ಞರಾದ ಡಾ| ರಜತ್, ಕಣ್ಣಿನ ತಜ್ಞರಾದ ಡಾ|ಸುಭಾಶ್ಚಂದ್ರ, ಇ.ಎನ್.ಟಿ ತಜ್ಞರಾದ ಡಾ| ರೋಹನ್ ದೀಕ್ಷಿತ್, ಜನರಲ್ ಫಿಸಿಷಿಯನ್ ಡಾ| ಪ್ರೌಸ್ಟಿಲ್ ಮತ್ತು ಡಾ| ಆದರ್ಶ ತಪಾಸಣೆಯನ್ನು ನಡೆಸಿಕೊಟ್ಟರು. ೫೦೪ ಮಂದಿ ಶಿಬಿರದ ಸದುಪಯೋಗ ಪಡೆದುಕೊಂಡರು.

ಜ್ಞಾನವಿಕಾಸ ಸಮನ್ವಯಾಧಿಕಾರಿ ಶ್ರೀಮತಿ ಮಧುರಾ ವಸಂತ್ ಕಾರ್ಯಕ್ರಮ ನಿರೂಪಿಸಿದರು. ಜ್ಞಾನ ವಿಕಾಸ ಕೇಂದ್ರದ ಸದಸ್ಯರಾದ ತ್ರಿವೇಣಿ ಸ್ವಾಗತಿಸಿ, ವಲಯ ಮೇಲ್ವಿಚಾರಕ ಜನಾರ್ದನ್ ಧನ್ಯವಾದ ಅರ್ಪಿಸಿದರು. ಸೇವಾಪ್ರತಿನಿಧಿ ರಶ್ವಿ ಸುರೇಖಾ ಹಾಗೂ ಶೌರ್ಯವಿಪತ್ತು ನಿರ್ವಹಣಾ ಘಟಕದ ಮತ್ತು ಒಕ್ಕೂಟದ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದು ಶಿಬಿರದ ಯಶಸ್ವಿಗೆ ಸಹಕರಿಸಿದರು.

- Advertisement -

Latest News

error: Content is protected !!