Thursday, June 4, 2026
Homeತಾಜಾ ಸುದ್ದಿಬೆಳ್ತಂಗಡಿ: ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ವಿನೂತನ ವಸ್ತು ಪ್ರದರ್ಶನ - CIRCUIT EXPO...

ಬೆಳ್ತಂಗಡಿ: ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ವಿನೂತನ ವಸ್ತು ಪ್ರದರ್ಶನ – CIRCUIT EXPO – 2022

- Advertisement -
- Advertisement -

ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ ಕಾಲೇಜಿನ ಎಲೆಕ್ಟ್ರಾನಿಕ್ಸ್ ಅಂಡ್ ಕಮ್ಯೂನಿಕೇಷನ್ ವಿಭಾಗದ ವತಿಯಿಂದ CIRCUIT EXPO-2022 ಎಂಬ ವಿನೂತನ ವಸ್ತು ಪ್ರದರ್ಶನ ಕಾಲೇಜಿನ ಸಭಾಂಗಣದಲ್ಲಿ ಜರುಗಿತು.

ಕಾರ್ಯಕ್ರಮದ ಉದ್ಘಾಟಕರಾಗಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿ ಇದರ ಮುಖ್ಯೋಪಾಧ್ಯಾಯರಾದ ಶ್ರೀಮತಿ ಹೇಮಲತಾ ಹಾಗೂ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿಯಾದ ಶ್ರೀ ಬಿ ಸೋಮಶೇಖರ ಶೆಟ್ಟಿ ಆಗಮಿಸಿ ವಿದ್ಯಾರ್ಥಿಗಳಿಗೆ ತಾಂತ್ರಿಕ ಕೌಶಲ್ಯ ಹಾಗೂ ಉತ್ತಮ ಸುಧಾರಿತ ಮೌಲ್ಯಗಳನ್ನು ಮೈಗೂಡಿಸಿಕೊಳ್ಳುವಂತೆ ಸಲಹೆ ನೀಡಿದರು.

ಇದೇ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಸಂತೋಷ್ ಹಾಗೂ ವಿಭಾಗ ಮುಖ್ಯಸ್ಥೆ ಯಾದ ಶ್ರೀಮತಿ ಮೇರಿ, ಕಾಲೇಜಿನ ವ್ಯವಸ್ಥಾಪಕರಾದ ಶ್ರೀ ಚಂದ್ರನಾಥ್ ಜೈನ್, ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು. ಈ ಒಂದು ದಿನದ ವಿಶೇಷ ತಾಂತ್ರಿಕ ಹಬ್ಬದಲ್ಲಿ ಮಕ್ಕಳು ತಾವೇ ತಯಾರಿಸಿದ ಅನೇಕ ಎಲೆಕ್ಟ್ರಾನಿಕ್ಸ್ ಮಾದರಿಗಳನ್ನು ಪ್ರದರ್ಶಿಸಿದರು,

ಜೊತೆಗೆ ತಾಂತ್ರಿಕ ವಿಷಯದ ಕುರಿತಾದ ರಸಪ್ರಶ್ನೆ ಸ್ಪರ್ಧೆ ಹಾಗೂ ಮಿಸ್ಟರ್ ಬೀನ್ ಎಂಬ ವಿಭಿನ್ನ ಆಟದ ಜೊತೆಗೆ ಕಾರ್ಯಕ್ರಮದ ಕೊನೆಯಲ್ಲಿ ಉಜಿರೆಯ ರುಡಸೆಡ್ ಇದರ ಹಿರಿಯ ಉಪನ್ಯಾಸಕರಾದ ಶ್ರೀ ಅಬ್ರಹಮ್ ಜೇಮ್ಸ್ ಇವರಿಂದ ಸ್ವಉದ್ಯೋಗ ಕುರಿತಾಗಿ ಮಾಹಿತಿ ಕಾರ್ಯಾಗಾರ ಕೂಡ ನಡೆಯಿತು. ಈ ಎಲ್ಲಾ ಕಾರ್ಯಕ್ರಮಗಳಿಗೆ ಕಾಲೇಜಿನ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು

- Advertisement -

Latest News

error: Content is protected !!