Saturday, May 4, 2024
Homeತಾಜಾ ಸುದ್ದಿಬೆಳ್ತಂಗಡಿ: ಉಕ್ರೇನ್ ನಾಡಿನಲ್ಲಿ ಪ್ರಾಣಾಪಾಯ ಎದುರಿಸುತ್ತಿರುವ ಉಜಿರೆ ವಿದ್ಯಾರ್ಥಿನಿ ಹೀನಾ ಫಾತಿಮಾ

ಬೆಳ್ತಂಗಡಿ: ಉಕ್ರೇನ್ ನಾಡಿನಲ್ಲಿ ಪ್ರಾಣಾಪಾಯ ಎದುರಿಸುತ್ತಿರುವ ಉಜಿರೆ ವಿದ್ಯಾರ್ಥಿನಿ ಹೀನಾ ಫಾತಿಮಾ

spot_img
- Advertisement -
- Advertisement -

ಬೆಳ್ತಂಗಡಿ: ಉಕ್ರೇನ್‌ನ ಕಾರ್ಕಿವ್ ನಲ್ಲಿ ಮಂಗಳವಾರ ರಷ್ಯಾ ದಾಳಿಗೆ ಹಾವೇರಿ ಜಿಲ್ಲೆಯ ರಾಣೆಬೆನ್ನೂರು ನಿವಾಸಿ, ವೈದ್ಯ ವಿದ್ಯಾರ್ಥಿ ನವೀನ್ ಸಾವನ್ನಪ್ಪಿದ ಸ್ಥಳದಿಂದ ಕೇವಲ 100 ಮೀಟರ್ ಅಂತರದಲ್ಲಿ ಉಜಿರೆಯ ವೈದ್ಯ ವಿದ್ಯಾರ್ಥಿನಿ ಹೀನಾ ಫಾತಿಮಾ ಅವರೂ ಇತರ ಕನ್ನಡಿಗರ ಜೊತೆ ಬಂಕರ್ ನಲ್ಲಿ ಅಡಗಿಕೊಂಡಿದ್ದು ಅಪಾಯದ ಸ್ಥಿತಿಯಲ್ಲಿದ್ದಾರೆ.



ಉಜಿರೆಯ ಟಿ.ಬಿ ಕ್ರಾಸ್ ನಿವಾಸಿ ದಿ. ಯಾಸೀನ್ ಮತ್ತು ಶಹನಾ ದಂಪತಿ ಪುತ್ರಿ ಹೀನಾ ಫಾತಿಮಾ ಅವರೇ ಯುದ್ಧಗ್ರಸ್ಥ ಉಕ್ರೇನ್ ನಾಡಿನಲ್ಲಿ ಪ್ರಾಣಾಪಾಯ ಎದುರಿಸುತ್ತಿರುವ ವಿದ್ಯಾರ್ಥಿನಿ.


ದ್ವಿತೀಯ ವರ್ಷದ ಎಂಬಿಬಿಎಸ್ ವಿದ್ಯಾರ್ಥಿನಿಯಾಗಿರುವ ಹೀನಾ ಅವರು ಮೃತಪಟ್ಟ ನವೀನ್ ಅವರ ಬ್ಯಾಚ್ ನಲ್ಲೆ ಕಲಿಯುತ್ತಿದ್ದಾರೆ ಎಂದು ಅವರ ಮಾವ, ಉದ್ಯಮಿ ಆಬಿ ಅಲಿ ಅವರು ಮಾಹಿತಿ ನೀಡಿದ್ದಾರೆ.ನವೀನ್ ಸಾವಿಗೆ ಕಾರಣವಾದ ರಷ್ಯಾ ನಡೆಸಿದ ಗಂಭೀರ ಸ್ಫೋಟ ಇವರು ಇರುವ ಕಟ್ಟಡಕ್ಕಿಂತ ಕೇವಲ 100 ಮೀ. ದೂರದಲ್ಲಿ ಆಗಿತ್ತಂತೆ. ಕಟ್ಟಡವೊಂದರ ತಳಹಂತದ ಬಂಕರ್‌ನಲ್ಲಿ ಹೀನಾ ಫಾತಿಮಾ ಸೇರಿದಂತೆ ಒಟ್ಟು 7 ಮಂದಿ ಕನ್ನಡಿಗ ವಿದ್ಯಾರ್ಥಿಗಳು ತಮ್ಮನ್ನು ರಕ್ಷಿಸಿಕೊಂಡಿದ್ದರು.

ವಿದೇಶಾಂಗ ಇಲಾಖೆ ಅವರನ್ನು ಸಂಪರ್ಕಿಸಿದ್ದು, ಅವರಿಗೆ ಧೈರ್ಯ ತುಂಬುವ ಕಾರ್ಯ ಮಾಡುತ್ತಿದೆ. ಅಲ್ಲಿಂದ ಬುಧವಾರ ಅವರನ್ನು ಹೊರಬರುವಂತೆ ನಿರ್ದೇಶಿದ್ದು, ರೈಲು ಮಾರ್ಗದ ಮೂಲಕ 1000 ಕಿ.ಮೀ. ದೂರದಲ್ಲಿರುವ ಲಿವಿನ್ ಎಂಬ ಗಡಿ ಪ್ರದೇಶಕ್ಕೆ ಪ್ರಯಾಣಕ್ಕೆ ವ್ಯವಸ್ಥೆ ಮಾಡಿದೆ ಎಂಬ ಮಾಹಿತಿ ಇದೆ. ಒಂದು ದಿನ ಪ್ರಯಾಣ ನಡೆಸಿ ಗಡಿ ಸೇರಿದರೆ ಅಲ್ಲಿಂದ ವಿಮಾನದ ಮೂಲಕ ಅವರನ್ನು ಭಾರತಕ್ಕೆ ಕರೆ ತರುವ ಬಗ್ಗೆ ಎಂಬೆಸ್ಸಿ ಯೋಜನೆ ರೂಪಿಸಿದೆ.



ಹೀನಾ ಫಾತಿಮಾ ಅವರ ಜತೆ ಚಿಕ್ಕಮಗಳೂರು, ಬೆಂಗಳೂರಿನ ಇತರ ಆರು ಮಂದಿ ಇದ್ದಾರೆ ಎಂದು ಮಾಹಿತಿ ಒದಗಿದ್ದು, ಯುದ್ಧ ಆರಂಭವಾದ ದಿನಗಳಲ್ಲಿ ಅವರಿಗೆ ಬಿಸ್ಕೆಟ್ ಮತ್ತು ಬ್ರೆಡ್ ಖರೀದಿಗೆ ಹೊರಹೋಗಲು ಅನುಮತಿಸಲಾಗುತ್ತಿತ್ತು. ಆದರೆ ಮಂಗಳವಾರ ಕನ್ನಡಿಗ ನವೀನ್ ಸಾವನ್ನಪ್ಪುತ್ತಿರುವಂತೆ ಅಪಾಯದ ಸೂಚನೆ ರವಾನಿಸಿದೆ. ಇದೀಗ ರೈಲು ಪ್ರಯಾಣದ ವೇಳೆಯೂ ಅವರ ಜೀವಾಪಾಯದ ಬಗ್ಗೆ ಸರಕಾರ ಖಾತ್ರಿ ನೀಡಿಲ್ಲ ಎನ್ನಲಾಗಿದೆ. ಆದರೆ ವಿದೇಶಾಂಗ ಕಚೇರಿಯಿಂದ ಅವರನ್ನು ಮತ್ತು ಅವರ ಕುಟುಂಬ ವರ್ಗದವರನ್ನು ಸಂಪರ್ಕಿಸಲಾಗಿದ್ದು, ಹೇಗಾದರೂ ಮಾಡಿ ಊರಿಗೆ ಮರಳಿ ತರುವುದಾಗಿ ಭರವಸೆ ನೀಡಿದ್ದಾರೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

ಹೀನಾ ಅವರ ಮಾವ ಆಬಿದ್ ಅಲಿ ಮೂಲಕ ಅವರ ಮನೆಯವರನ್ನು ಡಿಸಿ ಕಚೇರಿಯಿಂದ ಮತ್ತು ಬೆಳ್ತಂಗಡಿ ತಹಶಿಲ್ದಾರ್ ಕಚೇರಿಯಿಂದ ಸಂಪರ್ಕಿಸಲಾಗುತ್ತಿದೆ.

- Advertisement -
spot_img

Latest News

error: Content is protected !!